ಆರೋಗ್ಯ ಉಚಿತ ತಪಾಸಣೆ ಶಿಬಿರ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಮುತ್ತೂರು ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಗಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣ ಮತ್ತು ಶ್ರೀರಾಮ ಆಸ್ಪತ್ರೆಯ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಶಿಬಿರದಲ್ಲಿ 400ಕ್ಕೂ ಹೆಚ್ಚು ಸಾರ್ವಜನಿಕರ ಆರೋಗ್ಯವನ್ನು ತಪಾಸಣೆ ನಡೆಸಿ ಉಚಿತ ವೈದ್ಯಕೀಯ ಸಲಹೆ ಮತ್ತು ಔಷಧಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ.ಎಚ್.ಜಿ.ವಿಜಯಕುಮಾರ್, ಡಾ.ಭಾಸ್ಕರ್ ಸೇರಿದಂತೆ ತಜ್ಞ ವೈದ್ಯರು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ನಗರಸಭಾ ಸದಸ್ಯ ರೇಲ್ವೇ ಸ್ಟೇಷನ್ ಮಲ್ಲೇಶ್, ಕರವೇ ಜಿಲ್ಲಾ ಕಾರ್ಯದರ್ಶಿ ಟಿ.ಜಿ.ಮಂಜುನಾಥ್, ತಾಲೂಕು ಅಧ್ಯಕ್ಷ ಡಿ.ಎನ್.ಮಂಜುನಾಥ್, ನಗರ ಘಟಕದ ಅಧ್ಯಕ್ಷ ಮೆಹಮೂಬ್ ಅನೇಕ ಮುಖಂಡರು ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.