ಒತ್ತಡ ಮುಕ್ತರಾಗಲು ಕ್ರೀಡೆ ಸ್ಫೂರ್ತಿ: ನಾರಾಯಣ ಸ್ವಾಮಿ
ಕ.ಪ್ರ.ವಾರ್ತೆ ರಾಮನಗರ ಮಾ.19
ದಿನನಿತ್ಯದ ಕೆಲಸದ ಒತ್ತಡದಿಂದ ಬೇಸತ್ತಿರುವ ಸರ್ಕಾರಿ ನೌಕರರ ಮನಸ್ಸಿಗೆ ಕ್ರೀಡಾಕೂಟಗಳು ಸ್ಫೂರ್ತಿ ನೀಡುತ್ತವೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾರಾಯಣಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸೋಮವಾರ ನಡೆದ ಸರ್ಕಾರಿ ನೌಕರರ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ಮನಸ್ಸಿಗೆ ಆಹ್ಲಾದ ಉಂಟು ಮಾಡುವುದಲ್ಲದೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವದಲ್ಲದೆ ಆತ್ಮವಿಶ್ವಾಸ ಮೂಡಿಸುತ್ತದೆ ಎಂದರು.
ಆರೋಗ್ಯವಂತ ಜೀವನಕ್ಕೆ ಕ್ರೀಡೆ ಅತ್ಯಗತ್ಯ. ಸರ್ಕಾರಿ ನೌಕರರು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಎಲ್ಲರೂ ಒಟ್ಟಾಗಿ ಬೆರೆತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಳ್ಳುವುದರಿಂದ ಮನಸ್ಸು ಉಲ್ಲಸಿತವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮುನಿಕೆಂಪೇಗೌಡ ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವೈ.ಟಿ.ಸೋಮಶೇಖರಯ್ಯ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಿ.ನವಜ್ಯೋತಿ, ದೈಹಿಕ ಪರಿವೀಕ್ಷಕ ಮುರಳೀಧರನ್, ಎಂ.ಎಚ್.ಹೊನ್ನಗಿರಿಗೌಡ, ಗುರುಮೂರ್ತಿ, ಪುಟ್ಟರಾಜು, ಜಯರಾಮ್, ಕಾಂತರಾಜು ಮತ್ತಿತರರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.