ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

136ನೇ ಉಚಿತ ನೇತ್ರ ಚಿಕಿತ್ಸಾ ಶಿಬಿರ

Parashurama
Updated On : 21 Mar 2013, 11:48 am

ದೇವನಹಳ್ಳಿ: ಇಲ್ಲಿನ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ,ಲಯನ್ ಸೇವಾ ಪ್ರತಿಷ್ಠಾನ ಹಾಗೂ ಬೆಂಗಳೂರು ಗೋಕುಲ ಮತ್ತು ಹೆಬ್ಬಾಳ ಲಯನ್ಸ್ ಸಂಸ್ಥೆಗಳ  ಸಂಯುಕ್ತ ಆಶ್ರಯದಲ್ಲಿ 136 ನೆ ಉಚಿತ ನೇತ್ರ ಚಿಕಿತ್ಸಾ ಶಿಬಿರವನ್ನು ಗುರುವಾರ ಆಯೋಜಿಸಲಾಗಿತ್ತು. ಹೆಬ್ಬಾಳ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀನಿವಾಸಗೌಡ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಇಂದಿನ ದಿನಗಳಲ್ಲಿ ಯಾವುದೇ ಕಾಯಿಲೆಗಳನ್ನು ಗುಣಪಡಿಸಲು ಖಾಸಗಿ ಅಥವ ಇತರ ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಇಲ್ಲಿನ ಲಯನ್ಸ್ ಸಂಸ್ಥೆಯವರು ಯಾವುದೇ ವೆಚ್ಚವಿಲ್ಲದೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿರುವುದು ಅಭಿನಂದನೀಯ ಎಂದರು.    ಹೆಬ್ಬಾಳ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಚನ್ನಕೃಷ್ಣೇಗೌಡರವರು ಮಾತನಾಡಿದರು. ಶಿಬಿರದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕೆ.ಶ್ರೀನಿವಾಸ್ ವಹಿಸಿದ್ದರು. ಆರೋಗ್ಯ ಸಮಿತಿ ಅಧ್ಯಕ್ಷ ಸಿ.ಭಾಸ್ಕರ್ ಅವರು ವಂದನೆ ಅರ್ಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments