ಬಿಆರ್ಟಿಯಲ್ಲಿ ನೂರಾರು ಎಕರೆ ಬೆಂಕಿಗಾಹುತಿ
ಯಳಂದೂರು: ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ ಹುಲಿ ರಕ್ಷಿತಾರಣ್ಯದಲ್ಲಿ ದುಷ್ಕರ್ಮಿಗಳ ಕುಕೃತ್ಯಕ್ಕೆ ಗುರುವಾರ ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ.
ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ವ್ಯಾಪ್ತಿಗೆ ಬರುವ ಯರಕನಗದ್ದೆಪೊಡು, ಮಂಜಿಗುಂಡಿಪೊಡು, ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರ, ರಂಗಯ್ಯನ ಅರಣ್ಯ ಪ್ರದೇಶ, ಸೀಗೆಬೆಟ್ಟ ಸೇರಿದಂತೆ 9 ಅರಣ್ಯ ಪ್ರದೇಶಗಳಲ್ಲಿ ದುಷ್ಕರ್ಮಿಗಳು ಏಕಕಾಲಕ್ಕೆ ಬೆಂಕಿ ಇಟ್ಟಿದ್ದರಿಂದ ಕ್ಷಣ ಮಾತ್ರದಲ್ಲಿ ನೂರಾರು ಎಕರೆ ಪ್ರದೇಶ ಸುಟ್ಟು ಬೂದಿಯಾಗಿದೆ. ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬೆಂಕಿ ತನ್ನ ಆರ್ಭಟವನ್ನು ಮುಂದುವರಿಸಿ ಮುಗಿಲೆತ್ತರಕ್ಕೆ ಜ್ವಾಲೆ ಚಿಮ್ಮಿಸುತ್ತಿತ್ತು. ಇದರಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ ಕೆಲ ಕಾಲ ಉರಿಯುವ ಜ್ವಾಲೆಯನ್ನು ನೋಡುತ್ತ ಸುಮ್ಮನೆ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನದ ಉರಿಬಿಸಿಲ ಸಮಯದಲ್ಲಿ ಧಗಧಗಿಸುತ್ತಿದ್ದ ಅಗ್ನಿ ಜ್ವಾಲೆಯನ್ನು ನಂದಿಸಲು ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ ಹರಸಾಹಸ ಮಾಡಿದರು. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.