ಬಸ್ನಿಂದ ಬಿದ್ದು ಯುವಕ ಸಾವು
ಚನ್ನಪಟ್ಟಣ: ಚಲಿಸುತ್ತಿದ್ದ ಬಸ್ನಿಂದ ಬಿದ್ದು ಯುವಕ ಸಾವಿಗೀಡಾಗಿರುವ ಘಟನೆ ತಾಲೂಕಿನ ಹೊಂಗನೂರು ಕೆರೆ ಏರಿಯ ಮೇಲೆ ನಡೆದಿದೆ. ಜಗದೀಶ್ (30) ಮೃತ ದುರ್ದೈವಿ, ಈತ ಹಮ್ಮಳ್ಳಿ ದೊಡ್ಡಿ ಗ್ರಾಮದವನಾಗಿದ್ದು, ಪಟ್ಟಣದಿಂದ ತಮ್ಮ ಸ್ವಗ್ರಾಮಕ್ಕೆ ಖಾಸಗಿ ಬಸ್ನಲ್ಲಿ ತೆರಳುವಾಗ ಬಾಗಿಲ ಬಳಿ ನಿಂತಿದ್ದ ಈತ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ತೀವ್ರ ಗಾಯ ಗೊಂಡಿದ್ದ ಈತನನ್ನು ಅಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.