ರಾಂಪುರ ಧರಣೀಶ್ ಜೆಡಿಎಸ್ಗೆ ಗುಡ್ಬೈ
ಚನ್ನಪಟ್ಟಣ: ತಾಲೂಕು ರಾಜಕಾರಣದಲ್ಲಿ ಆಪರೇಷನ್ ಪರ್ವ ಬಿರುಸುಗೊಂಡಿದೆ. ಪಕ್ಷಗಳಲ್ಲಿ ಅಸಮಾಧಾನ ತೀವ್ರಗೊಂಡಿದ್ದು ಇಂತಹುದೇ ಬೆಳವಣಿಗೆಯ ಹಿನ್ನೆಲೆಯಲ್ಲಿ ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರಾಂಪುರ ಧರಣೀಶ್ ಕುಮಾರ್ ಜೆಡಿಎಸ್ಗೆ ಗುಡ್ಬೈ ಹೇಳಿದ್ದಾರೆ.
ತಾಲೂಕಿನ ಖಾಸಗಿ ಹೋಟೆಲಲ್ನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು ರಾಜೀನಾಮೆ ವಿಷಯವನ್ನು ಸ್ಪಷ್ಟಪಡಿಸಿದ್ದು, ಯಾವುದೇ ಪಕ್ಷಗಳಿಗೂ ಹೋಗುವುದಿಲ್ಲ ನಾನು ರಾಜಕೀಯವಾಗಿ ನಿವೃತ್ತಿ ಗೊಳ್ಳುತ್ತೇನೆ ಎಂದು ಪ್ರಕಟಿಸಿದರು. ನಾನು ಜೆಡಿಎಸ್ನ ನಿಷ್ಠಾವಂತ ಕಾರ್ಯಕರ್ತನಾಗಿದ್ದು ಪಕ್ಷದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ ಬಂದಿದ್ದೇನೆ. ಪ್ರತಿಯೊಂದು ಚುನಾವಣೆಯಲ್ಲೂ ನಮ್ಮ ಪಕ್ಷವನ್ನು ಬಲಗೊಳಿಸಲು ಶ್ರಮಿಸಿದ್ದು ನನ್ನ ಜನಪರ ಧೋರಣೆಗಳಿಗೆ ಕುಮಾರಸ್ವಾಮಿ ಮನ್ನಣೆ ನೀಡದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.