ಬೆಂಗಳೂರು ಗ್ರಾಮಾಂತರ

ಚನ್ನಪಟ್ಟಣ ಕ್ಷೇತ್ರ ಅಭ್ಯರ್ಥಿ: ಹೈಕಮಾಂಡ್‌ನಿಂದ ತೀರ್ಮಾನ

ಕ.ಪ್ರ.ವಾರ್ತೆ ರಾಮನಗರ ಮಾ.30
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಾಮಾಜಿಕ ನ್ಯಾಯದ ಚಿಂತನೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.
ಯೋಗೇಶ್ವರ್ ಅವರಿಗೆ ಟಿಕೆಟ್ ನೀಡಲು ತಮ್ಮದೇನೂ ಅಭ್ಯಂತರವಿಲ್ಲ. ನಾನೆಂದೂ ವ್ಯಕ್ತಿ ಆಧಾರಿತ ರಾಜಕಾರಣ ಮಾಡಿಯೇ ಇಲ್ಲ. ಪಕ್ಷದ ಸಿದ್ಧಾಂತದ ಮೇಲೆ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ಒಂದು ಸ್ಥಾನ ಹೆಚ್ಚಿದರೆ ನನಗೆ ಖುಷಿಯಾಗುತ್ತದೆ ಎಂದು ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ತಿಳಿಸಿದರು. ರಾಮನಗರ, ಮಾಗಡಿ ಮತ್ತು ಕನಕಪುರದಿಂದ ಪಕ್ಷದ ಟಿಕೆಟ್‌ಗಾಗಿ ತಲಾ ಒಬ್ಬರೇ ಅರ್ಜಿ ಹಾಕಿದ್ದಾರೆ. ಚನ್ನಪಟ್ಟಣದ ಟಿಕೆಟ್ ಪೈಪೋಟಿಯಲ್ಲಿ 2-3 ಹೆಸರುಗಳಿವೆ. ಸೂಕ್ತ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡುತ್ತಾರೆ. ತಾವೂ ಸೇರಿದಂತೆ ಯಾರೂ ಹಸ್ತಕ್ಷೇಪ ನಡೆಸಿಲ್ಲ ಎಂದರು.
ಡಿಸಿ ಜತೆ ಮಾತುಕತೆ: ರಾಮನಗರಕ್ಕೆ ಜಿಲ್ಲಾಧಿಕಾರಿಯನ್ನು ಕುಮಾರಸ್ವಾಮಿ ಮತ್ತು ತಾವು ಹಾಕಿಸಿಕೊಂಡು ಬಂದಿದ್ದು, ಕನಕಪುರದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುಸುತ್ತೇನೆಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖುದ್ದು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆಂದು ತಿಳಿಸಿದರು.
ತಾವು ಯಾರ ಕೈಗೊಂಬೆ ಅಲ್ಲವೆಂದು ಸ್ಪಷ್ಟಪಡಿಸಿರುವ ಜಿಲ್ಲಾಧಿಕಾರಿ ನವೀನ್‌ರಾಜ್ ಸಿಂಗ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಮೂಡಿದೆ ಎಂದು ಶಿವಕುಮಾರ್ ಹೇಳಿದರು.
ಅಪ್ಪಟ ಸುಳ್ಳುಗಾರ: ಸಿಂಧ್ಯಾ ಒಬ್ಬ ಅಪ್ಪಟ ಸುಳ್ಳುಗಾರ ಎಂದು ಜನತಾ ಪರಿವಾರದಲ್ಲಿ ಅವರೊಟ್ಟಿಗೆ 25 ವರ್ಷ ರಾಜಕಾರಣ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ನನ್ನ ಮೇಲೆ ಮಾಡಿರುವ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪವನ್ನು ಸಿಂಧ್ಯಾ ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿಯಾವುಲ್ಲಾ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!