ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಆಮಿಷಕ್ಕೆ ಬಲಿಯಾಗಿ ನಿಮ್ಮ ಅಮೂಲ್ಯ ಮತವನ್ನು ಮಾರಿಕೊಳ್ಳಬೇಡಿ

Mainashree
Updated On : 2 May 2013, 12:00 pm

ವಿಜಯಪುರ: ಆಮಿಷಕ್ಕೆ ಬಲಿಯಾಗಿ ನಿಮ್ಮ ಅಮೂಲ್ಯ ಮತವನ್ನು ಮಾರಿ ಕೊಳ್ಳಬೇಡಿ ಎಂದು ಟೌನ್ ಯುವ ಕಾಂಗ್ರೆಸ್ ಅಧ್ಯಕ್ಷ ಹರೀಶ್ ತಿಳಿಸಿದರು.
ಅವರು ಪಟ್ಟಣದ ಬಸ್ ನಿಲ್ದಾಣದ ಬಳಿಯ ವೆಂಕಟರಮಣ ಸ್ವಾಮಿ ದೇವಾಲಯದ ಮಹಾದ್ವಾರದ ಬಳಿಯಿಂದ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೊರಡಲು ಸಿದ್ಧವಾಗಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
ಕಳೆದ 5 ವರ್ಷಗಳಿಂದ ಕ್ಷೇತ್ರದ ಶಾಸಕರಾಗಿರುವ ವೆಂಕಟಸ್ವಾಮಿ ಸರ್ಕಾರದಿಂದ 450ಕೋಟಿ ರು.ಗಳಿಗೂ ಹೆಚ್ಚಿನ ಅನುದಾನ ತಂದು ಅನೇಕ  ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇದರೊಂದಿಗೆ ಸಚಿವ ವೀರಪ್ಪ ಮೊಯ್ಲಿ ಅವರ ನೇತೃತ್ವದಲ್ಲಿ ಶಿಕ್ಷಣ ಪಡೆದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಿರುದ್ಯೋಗ ಸಮಸ್ಯೆ ಕಾಡದಂತೆ ನೋಡಿಕೊಳ್ಳುವ ಭರವಸೆ ಇದೆ. ಆದ್ದರಿಂದ ಮತದಾರರು ತಮಗಾಗಿರುವ ಅಭಿವೃದ್ಧಿ ಕೆಲಸಗಳನ್ನು ಪರಿಗಣಿಸಿ ಯೋಚಿಸಿ ಕಾಂಗ್ರೆಸ್ಗೆ ಮತನೀಡಿ ಎಂದು ತಿಳಿಸಿದರು.
ಪಟ್ಟಣದ ರಸ್ತೆಗಳಲ್ಲಿ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ ಯುವಕರು ಮತದಾರರು ಯಾವುದೇ  ಅಮಿಷಕ್ಕೆ ಬಲಿಯಾಗದೆ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ನಾಯಕನನ್ನು ಅರಿಸುವ ಗುರಿಯನ್ನು ಹೊಂದಿ ಎಂಬ ಘೋಷಣೆಯೊಂದಿಗೆ ರ್ಯಾಲಿಯನ್ನು ಯಶಸ್ವಿಗೊಳಿಸಿದರು.
ಟೌನ್ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್, ಬಾಬು, ಮೂರ್ತಿ,ರಮೇಶ್, ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement