'ಜೆಡಿಎಸ್ ಗೆಲವು ಖಚಿತ'
ಕ.ಪ್ರ. ವಾರ್ತೆ ಆನೇಕಲ್ ಮೇ 1-
ಆನೇಕಲ್ ವಿಧಾನ ಸಭಾ ಕ್ಷೇತ್ರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಜಾತ್ಯತೀತ ಜನತಾ ದಳದ ಅಭ್ಯರ್ಥಿಗಳು ತೀವ್ರ ಸ್ಪರ್ಧೆ ನೀಡುತ್ತಿದ್ದು ಗೆಲವು ಖಚಿತ ಎಂದು ಜೆಡಿಎಸ್ ರಾಜ್ಯ ಮುಖಂಡ ಗೊಟ್ಟಗೆರೆ ಮಂಜುನಾಥ್ ತಿಳಿಸಿದ್ದಾರೆ.
ಅವರು ಬೆಂಗಳೂರು ದಕ್ಷಿಣ ಅಭ್ಯರ್ಥಿ ಆರ್. ಪ್ರಭಾಕರ ರೆಡ್ಡಿ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿ ಎರಡೂ ಕ್ಷೇತ್ರಗಳಲ್ಲಿ ನಿಷ್ಠಾವಂತ ಕಾರ್ಯಕರ್ತರೂ ಹಾಗೂ ಅಭಿಮಾನಿಗಳಿದ್ದು ಬಿಜೆಪಿ ಸೇರಿದಂತೆ ಅನ್ಯ ಪಕ್ಷಗಳ ಕೆಲ ಮುಖಂಡರು ಜೆಡಿಎಸ್ ರಾಜ್ಯದಲ್ಲಿ ಕೆಲ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಯಾವುದೇ ಗಾಳಿ ವದಂತಿಗೆ ಕಿವಿ ಕೊಡಬಾರದೆಂದು ಮನವಿ ಮಾಡಿದರು.