ಬಿಜೆಪಿಯ ದುರಾಡಳಿತದಿಂದ ಪ್ರಗತಿ ಕುಂಠಿತ: ಓಮನ್ ಚಾಂಡಿ
ಯಲಹಂಕ: ಬಿಜೆಪಿಯ ದುರಾಡಳಿತದಿಂದ ಕಳೆದ ಐದು ವರ್ಷದಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಕಾಂಗ್ರೆಸ್‌ನಿಂದ ಮಾತ್ರ ಅದನ್ನು ಸರಿಪಡಿಸಿ ಮತ್ತೆ ಅಭಿವೃದ್ಧಿ ತರಲು ಸಾಧ್ಯ ಎಂದು ಕೇರಳ ಮುಖ್ಯಮಂತ್ರಿ ಓಮನ್ ಚಾಂಡಿ ಅಭಿಪ್ರಾಯಪಟ್ಟರು.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ ಪರ ದೊಡ್ಡಬೊಮ್ಮಸಂದ್ರದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಮತ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಕಳೆದ 5 ವರ್ಷದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಭ್ರಷ್ಟ ವ್ಯವಸ್ಥೆ ತೊಲಗಿ ರಾಜ್ಯದಲ್ಲಿ ಸುಭದ್ರ ಹಾಗೂ ಸಮರ್ಥ ಆಡಳಿತ ನಡೆಸಲು ಕಾಂಗ್ರೆಸ್ ಪರ್ಯಾಯವಾಗಿದ್ದು, ಹಾಗಾಗಿ, ಮತದಾರರು ಈ ಬಾರಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಹೇಳಿದರು.
ಅಭ್ಯರ್ಥಿ ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಎಂ.ಆರ್.ಸೀತಾರಾಂ, ಕೇರಳ ಸಂಸದ ಆ್ಯಂಟನಿ, ಶಾಸಕ ಪಿ.ಸಿ.ವಿಷ್ಣುನಾದ ಮುಂತಾದವರು ಹಾಜರಿದ್ದರು.