ರಾಜ್ಯದಲ್ಲಿ ಕುಮಾರ ಪರ್ವ ಆರಂಭ'
ಮಾಗಡಿ: ಎಚ್.ಸಿ. ಬಾಲಕೃಷ್ಣ ನನ್ನ ಸಹೋದರನಿದ್ದಂತೆ, ಆತನಿಗೆ ಮಂತ್ರಿಯಾಗುವ ಯೋಗವಿದೆ, ಬಾಲಕೃಷ್ಣ ಅವರನ್ನು 30 ಸಾವಿರ ಮತಗಳ ಅಂತರದಿಂದ ಮತದಾರರು ಗೆಲ್ಲಿಸಿ. ಕ್ಷೇತ್ರಕ್ಕೆ ಶಾಶ್ವತವಾದ ನೀರಾವರಿ ಯೋಜನೆ ತರುವ ಸಂಕಲ್ಪ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಾಗಡಿ ಕೆಂಪೇಗೌಡ ಬಯಲು ರಂಗಮಂದಿರದಲ್ಲಿ ಜೆಡಿಎಸ್ ಏರ್ಪಡಿಸಿದ್ದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಕುಮಾರ ಪರ್ವ ಆರಂಭಗೊಂಡಿದೆ. ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಿದೆ. 40 ರಿಂದ 50 ಸ್ಥಾನ ಜೆಡಿಎಸ್ ಗೆಲ್ಲುತ್ತದೆ ಎಂದು ಮಾಧ್ಯಮಗಳು ಹೇಳುತ್ತಿವೆ ಎಂದರು.