ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರಾಮನಗರಕ್ಕೆ ಕುಮಾರಸ್ವಾಮಿ ಗೆಲ್ಲಿಸಿ'

Rashmi Kasaragodu
Updated On : 3 May 2013, 12:33 pm

ಕ.ಪ್ರ.ವಾರ್ತೆ   ರಾಮನಗರ   ಮೇ.2
ರಾಮನಗರ ಸಹಿತ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ ಹಾಗೂ ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ರೂಪಿಸುವುದಕ್ಕಾಗಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭಾರಿ ಮತಗಳ ಅಂತರದಿಂದ ಆಯ್ಕೆ ಮಾಡುವಂತೆ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಮನವಿ ಮಾಡಿದರು.
ತಾಲೂಕಿನ ಕಸಬಾ ಹೋಬಳಿಯ ಬಿಳಗುಂಬ, ಕುರುಬರಹಳ್ಳಿ, ಜಯಪುರ, ವಿಜಯಪುರ, ಕನ್ನಮಂಗಲದೊಡ್ಡಿ, ರಾಜೀವ್‌ಗಾಂಧಿ ಪುರ ಸಹಿತ ವಿವಿಧೆಡೆ ಗುರುವಾರ ಬಿರುಸಿನ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಮನಗರದ ಮನೆಮಗ ಕುಮಾರಸ್ವಾಮಿ ಅವರ ಕೈ ಹಿಡಿಯುವುದು ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದರು. ಕುಮಾರಸ್ವಾಮಿ ಅವರು ಈ ಕ್ಷೇತ್ರದ ಜನತೆಯ ಮೇಲಿನ ಅತೀವ ವಿಶ್ವಾಸ ಮತ್ತು ಅನಿವಾರ್ಯ ಪರಿಸ್ಥಿತಿಯಿಂದ ರಾಜ್ಯ ಪ್ರವಾಸಕ್ಕೆ ತೆರಳಿದ್ದಾರೆ. ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲಿದ್ದು, ಕುಮಾರಸ್ವಾಮಿ ಅವರಿಗೆ ಕ್ಷೇತ್ರದ ಮತದಾರ ಆಶೀರ್ವಾದ ಮಾಡಬೇಕು ಎಂದು ಹೇಳಿದರು.
ತೀರಾ ಹಿಂದುಳಿದಿದ್ದ ರಾಮನಗರವನ್ನು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು ಜಿಲ್ಲೆಯಾಗಿ ರೂಪಿಸಿ, ಅಭಿವೃದ್ಧಿ ಕೆಲಸಗಳಿಗಾಗಿ 1400 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಅವರ ಪರಿಶ್ರಮ, ಕಾಳಜಿಯನ್ನು ಜನತೆ ಎಂದಿಗೂ ಮರೆಯುವುದಿಲ್ಲ ಎಂದು ಅನಿತಾ ವಿಶ್ವಾಸ ವ್ಯಕ್ತಪಡಿಸಿದರು.
ಶೋಷಿತ ಸಮುದಾಯದವರು, ಅಬಲೆಯರು, ವೃದ್ಧರು, ವಿಧವೆಯರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಜೆಡಿಎಸ್ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮಾಸಾಶನ ಮೊತ್ತ ಹೆಚ್ಚಳಕ್ಕೆ ತಮ್ಮ ಪಕ್ಷ ನಿರ್ಧರಿಸಿದೆ. ಇದೆಲ್ಲದರ ಅನುಷ್ಠಾನದ ಜತೆಗೆ ಜನರ ನೆಮ್ಮದಿ ಜೀವನಕ್ಕಾಗಿ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು ಎಂದರು.
ಪ್ರಚಾರ ಕಾರ್ಯಕ್ರಮದಲ್ಲಿ ಶಾಸಕ ಕೆ.ರಾಜು ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement