ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸಾಮಾಜಿಕ ನ್ಯಾಯದ ಹರಿಕಾರ ಅಂಬೇಡ್ಕರ್

Rashmi Kasaragodu
Updated On : 3 May 2013, 12:01 pm

ರಾಮನಗರ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನವನ್ನು ರಚಿಸಿದ ಸಾಮಾಜಿಕ ನ್ಯಾಯದ ಹರಿಕಾರ ಎಂದು ಉರಿಲಿಂಗ ಪೆದ್ದೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಜ್ಞಾನ ಪ್ರಕಾಶ್ ಸ್ವಾಮೀಜಿ ತಿಳಿಸಿದರು. ಚನ್ನಪಟ್ಟಣದ ದೇವರಹೊಸಹಳ್ಳಿ ಗ್ರಾಮದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಯುವಕ ಸಂಘ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜನ್ಮ ದಿನೋತ್ಸವ ಹಾಗೂ ಎಲೆಕೇರಿ ಡಿ.ರಾಜಶೇಖರ್ ಅವರ ಕವನ ಪುಷ್ಪ ಜೈ ಭೀಮ್ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.ಅಂಬೇಡ್ಕರ್  ಹೆಣ್ಣು ಮಕ್ಕಳಿಗೆ ಬದುಕುವ ಹಕ್ಕನ್ನು ಕಲ್ಪಿಸಿಕೊಟ್ಟಿದ್ದರು. ಹಾಗೆಯೇ ಪ್ರತಿಯೊಬ್ಬರಿಗೂ ಶಿಕ್ಷಣದ ಹಕ್ಕನ್ನು ಪ್ರತಿಪಾದಿಸಿದ ಮಾನವತೆಯ ಪ್ರತಿಪಾದಕ ಎಂದರು. ಸಾಹಿತಿ ಎಲೆಕೇರಿ ಡಿ.ರಾಜಶೇಖರ್ ರಚಿಸಿರುವ ಜೈ ಭೀಮ್ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಪಿ.ಜೆ.ಗೋವಿಂದರಾಜ್ ಮಾತನಾಡಿದರು. ವಿಜಯ್ ರಾಂಪುರ, ಬಿ.ಪಿ.ಸುರೇಶ್, ಡಾ.ಅಕ್ರಂ ಪಾಷಾ, ಚಿಕ್ಕರಾಮಯ್ಯ, ಹನುಮಯ್ಯ, ಸಿಂಗ್ರಯ್ಯ, ತಮ್ಮಣ್ಣ, ಪಾಪಣ್ಣ, ದೇವರಾಜು, ರಾಮಯ್ಯ, ಸೋಮಶೇಖರ್ ಮತ್ತಿತರರು ಭಾಗವಹಿಸಿದ್ದರು.
'ಬೀದಿವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ'
ನೆಲಮಂಗಲ: ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ ನೀಡಿ ಆರ್ಥಿಕ ಸ್ವಾವಲಂಬಿಗಳಾಗಲು  ವಿಶೇಷ ಯೋಜನೆಯನ್ನು ರೂಪಿಸಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನುಡಿದರು. ಅವರು  ಗುರುವಾರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ಜೆಡಿಎಸ್ ಅಭ್ಯರ್ಥಿ ಡಾ.ಕೆ.ಶ್ರೀನಿವಾಸಮೂರ್ತಿ ಪರ ರೋಡ್ ಶೋ ನಡೆಸಿ ಮತ ಯಾಚಿಸಿ ಮಾತನಾಡಿದರು.  ತಮ್ಮ ಪಕ್ಷ ಆಡಳಿತಕ್ಕೆ ಬಂದರೆ ಹಲವಾರು ಯೋಜನೆ ಜಾರಿಗೊಳಿಸಲಿದೆ ಎಂದು ಅವರು ತಿಳಿಸಿದರು.
ಟೈರ್ ಪಂಕ್ಚರ್: 60 ಮಂದಿ ಪಾರು
ಸೂಲಿಬೆಲೆ: ಚಲಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಒಂದರ ಮುಂಭಾಗ ಟೈರು ಪಂಕ್ಚರ್ ಆದ ಪರಿಣಾಮ  ನಿಯಂತ್ರಣ ತಪ್ಪಿದ್ದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 60 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇಲ್ಲಿಗೆ ಸಮೀಪದ ನಂದಗುಡಿ ಹೋಬಳಿಯರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಬುಧವಾರ ಕೋಲಾರ, ಬೆಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಎಂ.ಹೊಸ ಹಳ್ಳಿ ಗೇಟ್ ಬಳಿ  ಬಸ್ಸಿನ ಬಲಭಾಗದ ಟೈರು ಒಡೆದು ಪಂಕ್ಚರಾಗಿ ಸ್ಫೋಟಗೊಂಡಿತು. ದೊಡ್ಡ ಮೋರಿ ಗಮನಿಸಿದ ಚಾಲಕ ವಾಹನವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಅಪಾಯವಾಗದಂತೆ ನಿಲ್ಲಿಸಿದ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement