5ರವರೆಗೆ ಮದ್ಯ ಮಾರಾಟ ನಿಷೇಧ
ಕ.ಪ್ರ.ವಾರ್ತೆ ಬೆಂಗಳೂರು ಮೇ 3
ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆ ಮೇ 5ರ ಮಧ್ಯರಾತ್ರಿವರೆಗೂ ಮುಂದುವರಿಯಲಿದೆ. ಮತದಾರರಿಗೆ ಆಮಿಷವೊಡ್ಡುವ ಸಲುವಾಗಿ ಅಭ್ಯರ್ಥಿಗಳು ಮದ್ಯವನ್ನು ಹೆಚ್ಚಾಗಿ ಖರೀದಿಸಿ ಅದನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಶಾಂತಿಯುತ ಹಾಗೂ ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸಿಕೊಡುವ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕಾನೂನು ಬಾಹಿರವಾಗಿ ಮದ್ಯ ಮಾರಾಟ, ಸಾಗಣೆ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.