ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
ಮಾಗಡಿ: ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಮೇಲೆ ಜೆಡಿಎಸ್ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಲಕ್ಕೇನಹಳ್ಳಿ ಹ್ಯಾಂಡ್ ೆಪೋಸ್ಟ್ ಬಳಿ ಶುಕ್ರವಾರ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತ ಉಮೇಶ್ ಹಲ್ಲೆಗೊಳಗಾಗಿದ್ದು, ಗಾಯಾಳು ಉಮೇಶ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಜೆಡಿಎಸ್ ಕಾರ್ಯಕರ್ತರಾದ ಸೋಲೂರು ಗ್ರಾ.ಪಂ.ಸದಸ್ಯ ಗೋಪಾಲ್, ನೆಲಮಂಗಲದ ಕಾಂತರಾಜು, ಹನುಮಂತರಾಜು ಇತರರು ಎಂದು ಗಾಯಳು ಉಮೇಶ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಉಮೇಶ್ ತಿಳಿಸಿದ್ದಾರೆ.