ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕುರುಬ ಸಮಾಜ ಬೆಂಬಲ

Rashmi Kasaragodu
Updated On : 4 May 2013, 12:45 pm

ದೇವನಹಳ್ಳಿ: ದೇವನಹಳ್ಳಿ ತಾಲೂಕಿನಲ್ಲಿರುವ ಕುರುಬ ಸಮಾಜಕ್ಕೆ ತಾಲೂಕಿನ ಜೆಡಿಎಸ್ ವರಿಷ್‌ಠರು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ, ಪುರಸಭೆಗಳಲ್ಲಿ ಅಲ್ಲದೆ ಇತರ ಸಹಕಾರ ಸಂಸ್ಥೆಗಳಲ್ಲಿ ಹೆಚ್ಚಿನ ಸ್ಥಾನಮಾನ ನೀಡಿರುವ ಹಿನ್ನೆಲೆಯಲ್ಲಿ  ಕುರುಬ ಸಮಾಜ  ಜೆಡಿಎಸ್ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಅವರಿಗೆ ಬೆಂಬಲ ಸೂಚಿಸಿದೆ ಎಂದು ಕುರುಬ ಸಮಾಜದ ಕಾರ್ಯಾಧ್ಯಕ್ಷ ಮುನಿನಂಜಪ್ಪ ತಿಳಿಸಿದ್ದಾರೆ.
ರಾಜ್ಯ ಮಟ್ಟದಲ್ಲಿ ಯಾವುದೇ ಪಕ್ಷ ಕುರುಬ ಸಮಾಜಕ್ಕೆ ಸ್ಥಾನ ಮಾನ ನೀಡಿದರೂ ಆ ಪಕ್ಷವನ್ನೂ ಅಭಿನಂದಿಸುತ್ತೇವೆ. ಅದೇ ರೀತಿ ದೇವನಹಳ್ಳಿಯಲ್ಲಿ ಜೆಡಿಎಸ್‌ಗೆ ಋಣಿಯಾಗಿದ್ದೇವೆ ಎಂದು ಜಿಪಂ ಸದಸ್ಯ ಎಂ.ಬೀರಪ್ಪ ತಿಳಿಸಿದರು.
ಜಿ.ಪಂ.ಮಾಜಿ ಸದಸ್ಯ ಬಸವರಾಜು, ತಾಪಂ ಮಾಜಿ ಅಧ್ಯಕ್ಷ ಮಂಜುನಾಥ್, ಪುರಸಭಾ ಮಾಜಿ ಉಪಾಧ್ಯಕ್ಷ ಪಿ.ರವಿಕುಮಾರ್ ಹಾಗೂ ಪುರಸಭಾ ಸದಸ್ಯ ಜಿ.ಎ.ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement