ಜೆಡಿಎಸ್ ಮನೆ ಪ್ರಚಾರ
ಕನಕಪುರ: ವಿಧಾನಸಭೆ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದ ಶುಕ್ರವಾರ ಎಲ್ಲಾ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮಿಂಚಿನೋಪಾದಿಯಲ್ಲಿ ಸಂಚರಿಸಿ ತಮ್ಮ ತಮ್ಮ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಬಾಣಂತಮಾರಮ್ಮ ಬಡಾವಣೆಯಲ್ಲಿ ಜೆಡಿಎಸ್ ಮುಖಂಡ ಸ್ಟುಡಿಯೋ ಚಂದ್ರು ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಮನೆಮನೆ ಗಳಿಗೆ ತೆರಳಿ ಮತಯಾಚನೆ ಮಾಡಿದರು. ನೂರಾರು ಮಂದಿ ಕಾರ್ಯಕರ್ತರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಜೆಡಿಎಸ್ ಮುಖಂಡರಾದ ಪಾರ್ವತಮ್ಮ, ಶಿವರಾಣಿ, ಬೇಬಿ ಉಷಾಕುಮಾರಿ,ಚಿಕ್ಕಣ್ಣ, ಹಾಗೂ ಸ್ನೇಹಮಯಿ ಗೆಳೆಯರ ಬಳಗದ ಪದಾಧಿಕಾರಿಗಳು ಜೆಡಿಎಸ್ ಅಭ್ಯರ್ಥಿ ಪಿಜಿಆರ್ ಸಿಂಧ್ಯಾ ಬೆಂಬಲಿಸಲು ಕೋರಿದರು.