ಪಕ್ಷೇತರ ಅಭ್ಯರ್ಥಿ ಮತಯಾಚನೆ
ನೆಲಮಂಗಲ: ಸ್ಥಳೀಯ ನಿರುದ್ಯೋಗಿ ಯುವಕ ಯುವತಿಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಲ್ಪಿಸಲು ಶ್ರಮಿಸುವುದಾಗಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಚೌಡಯ್ಯ ಹೇಳಿದರು. ಅವರು ಶುಕ್ರವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಾದ ಯಾತ್ರೆ ಮೂಲಕ ಕಾರ್ಯಕರ್ತರೊಂದಿಗೆ ತೆರಳಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡುತ್ತಾ ಕ್ಷೇತ್ರದಲ್ಲಿರುವ ರೈತರ ಅಭಿವೃದ್ಧಿಗಾಗಿ ಕೆರೆಗಳಿಗೆ ನೇತ್ರಾವತಿ, ಹೇಮಾವತಿ ನೀರು ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಮೂಲಭೂತ ಸಮಸ್ಯೆಗಳಾದ ಒಳಚರಂಡಿ, ರಸ್ತೆ ಕಾಮಗಾರಿಗಳನ್ನು ಉತ್ತಮ ರೀತಿ ನಿರ್ಮಿಸಿ ಕ್ಷೇತ್ರವನ್ನು ಮಾದರಿ ಮಾಡಲು ತಾವುಗಳು ಮತ ನೀಡಬೇಕು ಎಂದು ಮನವಿ ಮಾಡಿದರು. ಪ್ರಚಾರದಲ್ಲಿ ಮುಖಂಡರಾದ ಬೈರಣ್ಣ, ಪುಷ್ಪ, ನಾರಾಯಣಪ್ಪ, ವೆಂಕಟಪ್ಪ, ತಿಮ್ಮಯ್ಯ ಸೇರಿದಂತೆ ಮತ್ತಿತರರು ಇದ್ದರು.