ಪಿಳ್ಳಮುನಿಶಾಮಪ್ಪ ಪರ ಮತಯಾಚನೆ
ದೇವನಹಳ್ಳಿ: ಪಟ್ಟಣದಲ್ಲಿ ಜೆಡಿಎಸ್ ಪರ ಮತಯಾಚನೆ ನಡೆಯಿತು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಐದು ವರ್ಷಗಳ ದುರಾಡಳಿತ ಮತ್ತು ಕೇಂದ್ರದಲ್ಲಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಕಲ್ಲಿದ್ದಲು ಹಗರಣ, ಕಾಮನ್ವೆಲ್ತ್ ಹಗರಣ ಹಾಗೂ 2ಜಿ ಹಗರಣಗಳಿಂದ ಮತದಾರರು ಬೇಸತ್ತು ಈ ಬಾರಿ ರಾಜ್ಯದಲ್ಲಿ ಜೆಡಿಎಸ್ಗೆ ಒಲವು ತೋರಿದ್ದಾರೆ ಎಂದು ಜೆಡಿಎಸ್ ಮುಖಂಡರಾದ ವೈ.ಕೆ.ಚಂದ್ರಶೇಖರ್, ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸಿದರು. ತಾಲೂಕಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೂ ಕುಡಿಯುವ ನೀರು, ವಿದ್ಯುತ್ ಸಮಸ್ಯೆ ಅಲ್ಲದೆ, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಬೇಸತ್ತಿದ್ದಾರೆ ಎಂದರು.