ಸುಳ್ಳು ದಾಖಲೆ; ಅಭ್ಯರ್ಥಿಗೆ ನೋಟಿಸ್
ಬೆಂಗಳೂರು: ಕೋಲಾರದ ಮುಳುಬಾಗಿಲು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜಿ. ಮಂಜುನಾಥ್ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ಮುರಳಿ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ರಾಮಮೋಹನರೆಡ್ಡಿ ಅವರಿದ್ದ ಏಕಸದಸ್ಯ ಪೀಠ, ಜಿ. ಮಂಜುನಾಥ್ ವಿರುದ್ಧ ನೋಟಿಸ್ ಜಾರಿ ಮಾಡಿದ್ದು, ಚುನಾವಣಾ ಫಲಿತಾಂಶ ಅರ್ಜಿಯ ಅಂತಿಮ ಆದೇಶಕ್ಕೊಳಪಟ್ಟಿರುತ್ತದೆ ಎಂದು ತಿಳಿಸಿದೆ. ಭೈರಾಗಿ ಜಾತಿಗೆ ಸೇರಿರುವ ಜಿ. ಮಂಜುನಾಥ್ ಅವರು ಬುಡಗ ಜಂಗಮ ಜಾತಿಗೆ ಸೇರಿದವರು ಎಂದು ಸುಳ್ಳು ಪ್ರಮಾಣಪತ್ರ ನೀಡಿದ್ದಾರೆ. ಇದನ್ನು ಚುನಾವಣಾ ಆಯೋಗ ಪರಿಗಣಿಸದೆ ಸ್ಪರ್ಧಿಸಲು ಅನುಮತಿ ನೀಡಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ