ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ
ವಿಜಯಪುರ: ಪಟ್ಟಣ ಸಮೀಪದ ಹಾರೋಹಳ್ಳಿಯ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ರಾಜ್ಗೋಪಾಲ್ ಅವರ ಸಮ್ಮುಖದಲ್ಲಿ ಬಹಳಷ್ಟು ಮಂದಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು. ತಾಲೂಕು ಹಿಂದುಳಿದ ವರ್ಗಗಳ ಕಾರ್ಯದರ್ಶಿ ಸುಬ್ರಮಣಿ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಗೋಪಿ ಇದ್ದರು.