ಮತಗಟ್ಟೆಗಳಿಗೆ ಚುನಾವಣಾ ವೀಕ್ಷಕರ ಭೇಟಿ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ನಗರ ಮತ್ತು ಗ್ರಾಮಾಂತರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಚುನಾವಣಾ ವೀಕ್ಷಕರು ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರ ಚುನಾವಣಾ ಆಯೋಗದ ಮೂಲಕ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣಾ ವೀಕ್ಷಕರಾಗಿ ನೇಮಕವಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಜಿ.ಕೆ.ಶ್ರೀವಾತ್ಸವ, ಚುನಾವಣಾಧಿಕಾರಿ ಡಾ.ಮಹೇಶ್ ಸೇರಿದಂತೆ ಹಲವು ಅಧಿಕಾರಿಗಳೊಂದಿಗೆ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಹುತೇಕ ಶಾಂತಿಯುತ ಮತದಾನ ನಡೆದಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು.