ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಅಂತಾರಾಷ್ಟ್ರೀಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಎನ್ಐಇ ಸಾಧನೆ

Rashmi Kasaragodu
Updated On : 7 May 2013, 1:07 am

ಕ.ಪ್ರ.ವಾರ್ತೆ  ಮೈಸೂರು  ಮೇ 6
ಒರಾಕಲ್ ಶಿಕ್ಷಣ ಪರಿಷತ್ ನಡೆಸುವ ಅಂತಾರಾಷ್ಟ್ರೀಯ ಮಟ್ಟದ ಥಿಂಕ್ಕ್ವಿಷ್ಟ್ ಸ್ಪರ್ಧೆ- 2012 ರಲ್ಲಿ ಇಲ್ಲಿನ ಎನ್ಐಇ ಕಾಲೇಜಿನ ವಿದ್ಯಾರ್ಥಿಗಳು ಪ್ರಶಸ್ತಿ ಪತ್ರಕ್ಕೆ ಭಾಜನರಾಗಿದ್ದಾರೆ.
ಸುಮಂತ್ ಎಸ್. ಅವಧಾನಿ, ಕೆ.ಎನ್. ಶ್ರೀನಿಧಿ, ಟಿ.ಆರ್. ಕಶ್ಯಪ್, ಆರ್. ಆದಿತ್ಯ ಹಾಗೂ ಸುಚಿತ್ ಸಿ. ಅರೋಡಿ ಅವರು ಉತ್ತಮ ಸಾಧನೆ ತೋರಿಸಿ ಈ ಮಾನ್ಯತೆಗೆ ಪಾತ್ರರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಲ್. ಶೇಖರ್ ತಿಳಿಸಿದ್ದಾರೆ.
ಈ ಸ್ಪರ್ಧೆಯಲ್ಲಿ ವಿಶ್ವದ 100 ದೇಶಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್ಐಇ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಇಲ್ಲಿನ ಪ್ರಾಧ್ಯಾಪಕ ಡಾ. ಎನ್. ಸುರೇಶ್ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ತೋರಿಸಿದ್ದಾರೆ. ಸ್ವಯಂಸೇವಾ ಸಂಸ್ಥೆಗಳು ಸರ್ಕಾರ ಹಾಗೂ ಜನರ ನಡುವೆ ಯಾವ ರೀತಿ ಕಾರ್ಯನಿರ್ವಹಿಸುತ್ತಾ ಸೇತುವೆಯಾಗಿ ಕೆಲಸ ಮಾಡುತ್ತಿವೆ. ಹಾಗೂ ಆಧುನಿಕ ಯುಗದಲ್ಲಿ ಮಾಹಿತಿ ತಂತ್ರಜ್ಞಾನದ ಅಂತರ್ಜಾಲ ಮತ್ತಿತರ ಸೇವೆ ಬಳಸಿಕೊಂಡು ಮುಂದಿನ ಭವಿಷ್ಯವನ್ನು ಯಾವ ರೀತಿ ರೂಪಿಸಿಕೊಳ್ಳಬಹುದು ಎಂಬಿತ್ಯಾದಿ ವಿಚಾರಗಳನ್ನು ಸ್ಪರ್ಧೆಯಲ್ಲಿ ಮಂಡಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement