ಕೇಂಬ್ರಿಡ್ಜ್ ಶಾಲೆಗೆ ಈ ಬಾರಿಯೂ ಶೇ.100 ಫಲಿತಾಂಶ
ಚನ್ನಪಟ್ಟಣ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪಟ್ಟಣದ ಕೇಂಬ್ರಿಡ್ಜ್ ಶಾಲೆ ಈ ಬಾರಿಯೂ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿದೆ.
ಈ ಬಾರಿಯ ಪರೀಕ್ಷೆಗೆ ಕುಳಿತಿದ್ದ ಸಂಸ್ಥೆಯ 43 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಕಳೆದ 10 ವರ್ಷಗಳಿಂದ ಸತತವಾಗಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುತ್ತಾ ಬಂದಿರುವ ಸಂಸ್ಥೆ, ಈ
ಬಾರಿಯೂ ತನ್ನ ಸಾಧನೆಯನ್ನು ಕಾಯ್ದು ಕೊಂಡಿದೆ.ಈ ಬಾರಿಯ ಪರೀಕ್ಷೆಯಲ್ಲಿ ಸಂಸ್ಥೆಯ 8 ಮಂದಿ ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರೆ, 31 ಮಂದಿ ಪ್ರಥಮ ದರ್ಜೆಯಲ್ಲಿ ಮೂರು ಮಂದಿ ದ್ವಿತೀಯ ದರ್ಜೆಯಲ್ಲಿ ಒಬ್ಬ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಸಂಸ್ಥೆಯ ಎಂ.ಬಿ.ಕಾವ್ಯಶ್ರೀ (594) ಪ್ರಥಮ ಸ್ಥಾನ ಪಡೆದಿದ್ದರೆ, ಮಂಜುನಾಥ್ ಎಸ್.ಅಭಿಷೇಕ್ (561) ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ, ದರ್ಶನ್.ಬಿ (559) ಅಂಕ ಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ.
ಅಭಿನಂದನೆ: ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುತ್ತಿರುವ ಸಂಸ್ಥೆಯ ಕೀರ್ತಿಯನ್ನು ಮತ್ತೊಮ್ಮೆ ಶಾಲೆಯ ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗ ಎತ್ತಿ ಹಿಡಿದಿದೆ ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಎಸ್.ಲಿಂಗೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ನೂರಕ್ಕೆ ನೂರರಷ್ಟು ಫಲಿತಾಂಶ ನೀಡಿದ ವಿದ್ಯಾರ್ಥಿಗಳು ಮತ್ತು ಉಪಾಧ್ಯಾಯರನ್ನು ಸಂಸ್ಥೆಯ ಧರ್ಮದರ್ಶಿ ಚಿತ್ರಾ ಲಿಂಗೇಶ್ ಕುಮಾರ್, ಪ್ರಾಂಶುಪಾಲ ನಿಂಗೇಗೌಡ ಅಭಿನಂದಿಸಿದ್ದಾರೆ.