ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ರಕ್ತದಾನದ ಬಗ್ಗೆ ಜಾಗೃತಿ ಮೂಡಲಿ'

Rashmi Kasaragodu
Updated On : 7 May 2013, 1:07 am

ಚಿಕ್ಕಬಳ್ಳಾಪುರ: ವಾಸವಿ ಜಯಂತಿ ಪ್ರಯುಕ್ತ ಆರ್ಯ ವೈಶ್ಯ ಮಂಡಳಿ ವತಿಯಿಂದ ಸೋಮವಾರ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ನಡೆಯಿತು.ಆರ್ಯ ವೈಶ್ಯ ಮಂಡಳಿಯ ಅಧ್ಯಕ್ಷ ನಂಜುಂಡ ರಾಮಯ್ಯ ಶೆಟ್ಟಿ ಮಾತನಾಡಿ, ಎಲ್ಲಾ ದಾನಕ್ಕಿಂತ ರಕ್ತದಾನ  ಅತ್ಯಂತ ಮಹತ್ತರವಾದುದು. ಈ ನಿಟ್ಟಿನಲ್ಲಿ ಯುವ ಸಮುದಾಯ ಸೇರಿದಂತೆ ಹೆಚ್ಚು ಹೆಚ್ಚು ಜನರು ರಕ್ತದಾನ ಮಾಡುವುದರಿಂದ ಆಪತ್ತಿನಲ್ಲಿದ್ದವರ ಪ್ರಾಣ ಉಳಿಸಬಹುದು ಎಂದು ಕಿವಿಮಾತು ಹೇಳಿದರು.
ಜನ ಜಾಗೃತಿ ಮತ್ತಷ್ಟು ಹೆಚ್ಚಬೇಕು: ಇತ್ತೀಚಿನ ದಿನಗಳಲ್ಲಿ ರಕ್ತದಾನಕ್ಕೆ ಸಂಬಂಧಪಟ್ಟಂತೆ ಇರುವ ಮೂಢನಂಬಿಕೆಗಳನ್ನು ತೊಲಗಿಸುವ ಕೆಲಸವೂ ಆಗುತ್ತಿದೆ. ಆದರೆ, ಇದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಪ್ರಮುಖವಾಗಿ ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಿ ರಕ್ತದಾನಕ್ಕೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು. ಶಿಬಿರದಲ್ಲಿ 120 ಯೂನಿಟ್ಗೂ ಹೆಚ್ಚು  ರಕ್ತ ಸಂಗ್ರಹವಾಯಿತು ಎಂದು ಸಂಘಟಕರು ತಿಳಿಸಿದ್ದಾರೆ. ಆರ್ಯ ವೈಶ್ಯ ಮುಖಂಡರಾದ ಎಂ.ಕೃಷ್ಣಮೂರ್ತಿ, ಎಸ್.ಎಲ್.ಸೂರ್ಯನಾರಾಯಣಶೆಟ್ಟಿ, ಎಂ.ಪ್ರಕಾಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement