ಅಪಪ್ರಚಾರಕ್ಕೆ ಖಂಡನೆ
ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ತಮ್ಮ ಬಗ್ಗೆ ಜೆಡಿಎಸ್ ಮುಖಂಡರು ಮತದಾರರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಅಪಪ್ರಚಾರ ಮಾಡಿರುವುದನ್ನು ಮಾಜಿ ಶಾಸಕ ಜಿ.ಚಂದ್ರಣ್ಣ ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿದ್ದಾರೆ. ಜೆಡಿಎಸ್‌ನಿಂದ ಟಿಕೆಟ್ ವಂಚಿತರಾದ ಚಂದ್ರಣ್ಣ ಅವರು ಬಿಜೆಪಿ ಪಕ್ಷದಿಂದ ಟಿಕೆಟ್ ಪಡೆದು ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಚುನಾವಣೆ ಹಿಂದಿನ ದಿನದಿಂದ ಚಂದ್ರಣ್ಣರವರು ಕಣದಿಂದ ನಿವೃತ್ತಿಯಾಗಿದ್ದಾರೆ, ಮತ್ತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲು ಮಾತುಕತೆ ನಡೆಸಿದ್ದಾರೆ ಎಂದು ವಿರೋಧಿಗಳು ಅಪಪ್ರಚಾರ ನಡೆಸಿದರು. ಇಂದು ಖಂಡನೀಯ ಎಂದು ಚಂದ್ರಣ್ಣ ತಿಳಿಸಿದರು. ಬಿಜೆಪಿ ವರಿಷ್ಠರು ತಮ್ಮ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿರುವುದಕ್ಕೆ ಅಭಿನಂದಿಸಿ ಚುನಾವಣೆಯಲ್ಲಿ ಮತದಾರರು ನೀಡುವ ತೀರ್ಪಿಗೆ ತಲೆಬಾಗುತ್ತೇನೆ ಎಂದರು.