ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕರ್ನಾಟಕ ಚಿತ್ರಕಲಾ ಪರಿಷತ್ ಬಿವಿಎ ಪದವಿಗೆ ಅರ್ಜಿ ಆಹ್ವಾನ

Rashmi Kasaragodu
Updated On : 8 May 2013, 12:55 pm

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು, ಚಿತ್ರಕಲಾ ಮಹಾವಿದ್ಯಾಲಯದಲ್ಲಿ 2013-14ನೇ ಸಾಲಿನ ಬಿವಿಎ ಕಲಾ ಪದವಿ ತರಗತಿಗಳಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಚಿತ್ರಕಲೆ, ವಾಣಿಜ್ಯ, ಶಿಲ್ಪಕಲೆ, ಗ್ರಾಫಿಕ್ ಕಲೆ ಮತ್ತು ಕಲಾ ಇತಿಹಾಸ ವಿಷಯಗಳಲ್ಲಿ ನಾಲ್ಕು ವರ್ಷಗಳ ಪದವಿ ತರಗತಿಗಳ ಕೋರ್ಸ್ ಇದಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಗಳನ್ನು ಕಾಲೇಜಿನ ಕಚೇರಿಯಲ್ಲಿ ಪಡೆದು ಕರ್ನಾಟಕ ಚಿತ್ರಕಲಾ ಪರಿಷತ್ತು ಹೆಸರಿನಲ್ಲಿ 300 ಡಿಡಿ ಪಡೆಯುವ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ 22261816. www.karnatakachitrakalaparishath.com

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement