ಪಿಳ್ಳಮುನಿಶಾಮಪ್ಪರವರಿಂದ ಮತದಾರರಿಗೆ ಅಭಿನಂದನೆ
ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಲು ಅವಕಾಶ ಮಾಡಿಕೊಟ್ಟ ಎಲ್ಲ ಮತದಾರರಿಗೆ ಪಿಳ್ಳಮುನಿಶಾಮಪ್ಪ ಅವರು ಬುಧವಾರ ಸಂಜೆ ಅಭಿನಂದನೆ ಸಲ್ಲಿಸಿದರು, ಇದೇ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ನೂತನ ಶಾಸಕರಿಗೆ ಹಾರಗಳನ್ನು ಹಾಕಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಮುಖಂಡರು ಹಾಗೂ ಮಾಜಿ ಸಂಸದರಾದ ಸಿ.ನಾರಾಯಣಸ್ವಾಮಿ ಮಾತನಾಡಿ 25 ವರ್ಷಗಳ ನಂತರ ದಲಿತ ಸಮುದಾಯದ ವ್ಯಕ್ತಿಯನ್ನು ಶಾಸಕರಾಗಲು ಅವಕಾಶ ಮಾಡಿಕೊಟ್ಟ ಜೆಡಿಎಸ್ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಆರ್.ಎನ್.ಕೃಷ್ಣಮೂರ್ತಿ, ಹಾಡೋನಹಳ್ಳಿ ಮುಖಂಡರಾದ ಅಪ್ಪಯ್ಯಣ್ಣ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ ಉಪಸ್ಥಿತರಿದ್ದರು. ನೂತನ ಶಾಸಕರಾದ ಪಿಳ್ಳಮುನಿಶಾಮಪ್ಪರವರು ಮಾತನಾಡಿ ದಲಿತರು ಮತ್ತು ಇತರ ಮೇಲ್ವರ್ಗದ ಜನರು ಶಾಂತಿ, ಪ್ರೀತಿ ಮತ್ತು ವಿಶ್ವಾಸದಿಂದ ಬಾಳುವಂತಾಗಬೇಕು ಎಂದರು.