ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರೋಡ್ ಶೋ ಮೂಲಕ ಮತದಾರರಿಗೆ ಕೃತಜ್ಞತೆ

Rashmi Kasaragodu
Updated On : 10 May 2013, 12:24 pm

ಕ.ಪ್ರ.ವಾರ್ತೆ   ದೊಡ್ಡಬಳ್ಳಾಪುರ   ಮೇ 9
ದೊಡ್ಡಬಳ್ಳಾಪುರ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಟಿ.ವೆಂಕಟರಮಣಯ್ಯ ಗುರುವಾರ ನಗರದಲ್ಲಿ ರೋಡ್ ಶೋ ನಡೆಸುವ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಬೆಳಗ್ಗೆ ತಾಲೂಕಿನ ರಾಜಘಟ್ಟ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಕೃತಜ್ಞತಾ ರೋಡ್ ಶೋಗೆ ಚಾಲನೆ ನೀಡಲಾಯಿತು. ದೊಡ್ಡಬಳ್ಳಾಪುರ ನಗರದ ನೆಲದಾಂಜನೇಯಸ್ವಾಮಿ ದೇವಾಲಯದ ಮುಂಭಾಗದಿಂದ ಹೊರಟ ಸಂಭ್ರಮಾಚರಣೆ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಆರ್.ಜಿ. ವೆಂಕಟಾಚಲಯ್ಯ, ಈ ಬಾರಿ ಕ್ಷೇತ್ರದ ಮತದಾರರು ಅತ್ಯಂತ ಜಾಗರೂಕತೆಯಿಂದ ಮತದಾನ ಮಾಡಿದ್ದಾರೆ. ಕ್ಷೇತ್ರದಲ್ಲಿ ಪಕ್ಷಾಂತರ ರಾಜಕಾರಣ ಮತ್ತು ಆಮಿಷಗಳ ರಾಜಕಾರಣವನ್ನು ಕೊನೆಗಾಣಿಸಿದ್ದು, ಭ್ರಷ್ಟಾಚಾರ ರಹಿತ ಆಡಳಿತದ ಬಯಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಯ ಗೆಲವು ಕ್ಷೇತ್ರದ ಮುಂದಿನ ಬೆಳವಣಿಗೆ ಮತ್ತು ಅಭಿವೃದ್ಧಿಯ ದಿಕ್ಸೂಚಿಯಾಗಲಿದೆ. ಜನರ ನಂಬಿಕೆಯನ್ನು ಉಳಿಸಿಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಉತ್ತಮ ಕಾರ್ಯಯೋಜನೆಗಳನ್ನು ಜಾರಿಗೆ ತರಬೇಕಿದೆ. ಮುಂದಿರುವ ಸವಾಲುಗಳಿಗೆ ಸ್ಪಷ್ಟ ಉತ್ತರ ಕಂಡುಕೊಳ್ಳಬೇಕಿದೆ. ಕಾಂಗ್ರೆಸ್ ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆಗಳು ಎಂದರು.ಶಾಸಕ ಟಿ.ವೆಂಕಟರಮಣಯ್ಯ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ರೋಡ್ ಶೋದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಅದೇ ರೀತಿ ನಗರ ಮತ್ತು ತಾಲೂಕಿನ ವಿವಿದೆಡೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಮಧುರೆ ಹೋಬಳಿ, ದೊಡ್ಡಬೆಳವಂಗಲ ಹೋಬಳಿ, ಕಸಬಾ ಹೋಬಳಿ ಮತ್ತು ಸಾಸಲು ಹೋಬಳಿ ಸೇರಿದಂತೆ ವಿವಿಧ ಹೋಬಳಿ ಕೇಂದ್ರಗಳು ಮತ್ತು ಗ್ರಾಮಗಳಲ್ಲೂ ಸಂಭ್ರಮಾಚರಣೆ ಕಂಡುಬಂತು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement