ಕೌಶಲ್ಯಾಭಿವೃದ್ಧಿ ತರಬೇತಿ
ರಾಮನಗರ: ರಾಮನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಧಾರವಾಡದ ಸಿಡಾಕ್ನ ಸಹಯೋಗದೊಂದಿಗೆ ಚನ್ನಪಟ್ಟಣದಲ್ಲಿ 4 ವಾರಗಳ ಮೊಬೈಲ್ ಫೋನ್ ದುರಸ್ತಿ ಹಾಗೂ ಸರ್ವಿಸ್ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಮೇ 30ರಿಂದ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಭಾಗವಹಿಸುವವರು 10ನೇ ತರಗತಿ ತೇರ್ಗಡೆಯಾಗಿರಬೇಕು ಹಾಗೂ 18 ರಿಂದ 35 ವರ್ಷದೊಳಗಿರಬೇಕು. ಆಸಕ್ತರು ತಮ್ಮ ಸ್ವವಿವರದೊಂದಿಗೆ, ಮೊಬೈಲ್ ನಂಬರ್ ಸಮೇತ ಅರ್ಜಿಯನ್ನು ಜಿಲ್ಲಾ ಉಪ ನಿರ್ದೇಶಕರು(ತ), ಸಿಡಾಕ್, ಕುಶಲಕರ್ಮಿ ತರಬೇತಿ ಸಂಸ್ಥೆ, ಎಂ.ಜಿ.ರಸ್ತೆ, ಚನ್ನಪಟ್ಟಣ ಇಲ್ಲಿಗೆ ಮೇ 20ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಿಲ್ಲಾ ಉಪನಿರ್ದೇಶಕರು(ತ) ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.9844346777 ಸಂಪರ್ಕಿಸಬಹುದು.
ಅರ್ಜಿ ಆಹ್ವಾನ
ರಾಮನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2013-14ನೇ ಸಾಲಿಗೆ ಹೊಸದಾಗಿ ಸೇರಿಸಿಕೊಳ್ಳಲು ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ 1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದ 5ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ರಾಮನಗರ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 10ರೊಳಗೆ ಮೇಲ್ಕಂಡ ಕಚೇರಿಗೆ ಸಲ್ಲಿಸುವುದು.