ಲೋಕಸಭಾ ಸ್ಥಾನಕ್ಕೆ ತಾವು ಆಕಾಂಕ್ಷಿ: ಲಿಂಗಪ್ಪ
ರಾಮನಗರ: ಎಚ್.ಡಿ.ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗುವ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಸದ್ಯದಲ್ಲೇ ಮರು ಚುನಾವಣೆ ನಡೆದರೆ ಅಥವಾ ಮುಂದಿನ ಸಾರ್ವತ್ರಿಕ ಚುನಾವಣೆಗೆ ತಾವು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಶಾಸಕ ಸಿ.ಎಂ. ಲಿಂಗಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಬಯಸಿದಲ್ಲಿ ನಾನು ಸ್ಪರ್ಧೆಗೆ ಸಿದ್ಧ. ಈ ಕುರಿತು ಪಕ್ಷದ ವರಿಷ್ಠರಿಗೆ ಈಗಾಗಲೇ ಮನವರಿಕೆ ಮಾಡಿಕೊಡಲಾಗಿದ್ದು, ಟಿಕೆಟ್ ಖಚಿತ ಎನ್ನುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಿಂಗಪ್ಪ ಅವರು ರಾಮನಗರ ಕ್ಷೇತ್ರದಲ್ಲಿ 3 ಬಾರಿ ಶಾಸಕರಾಗಿದ್ದರು. 1994ರಲ್ಲಿ ಎಚ್.ಡಿ.ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ದೇವೇಗೌಡ ಪ್ರಧಾನಿಯಾದ ಬಳಿಕ ತೆರವಾದ ಸ್ಥಾನಕ್ಕೆ ನಡೆದ ಮರು ಚುನಾವಣೆಯಲ್ಲಿ ಅಂಬರೀಷ್ ವಿರುದ್ಧ ಗೆಲವು ಸಾಧಿಸಿದ್ದರು. ನಂತರ 2004ರಲ್ಲಿ ಕುಮಾರಸ್ವಾಮಿ ವಿರುದ್ಧ ಪರಾಭವಗೊಂಡಿದ್ದರು.