ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕೆಎಸ್ಸಾರ್ಟಿಸಿಗೆ ಖಾಸಗಿ ಬಸ್ ಡಿಕ್ಕಿ; 15 ಗಾಯ

Rashmi Kasaragodu
Updated On : 13 May 2013, 12:57 pm

ರಾಮನಗರ: ನಿಂತಿದ್ದ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು 15 ಮಂದಿ ಗಾಯಗೊಂಡ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ಭಾನುವಾರ ಸಂಭವಿಸಿದೆ.  ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೈಸೂರು ಕಡೆ ತೆರಳುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿಲುಗಡೆ ಮಾಡಿತ್ತು. ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಬಸ್‌ಗೆ ಡಿಕ್ಕಿಯಾಗಿದೆ.  ಉಭಯ ಬಸ್‌ಗಳಲ್ಲಿ ಇದ್ದ 15 ಮಂದಿ ಗಾಯಗೊಂಡು ಸ್ಥಳೀಯ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ಖಾಸಗಿ ಬಸ್‌ನ ಬ್ರೇಕ್ ವಿಫಲವಾಗಿದ್ದೇ ಕಾರಣ ಎನ್ನಲಾಗಿದೆ.  ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸುಮಾರು 1 ತಾಸು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದರು. ಖಾಸಗಿ ಬಸ್ ವಶಕ್ಕೆ ತೆಗೆದುಕೊಂಡು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement