ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಕಾಂಗ್ರೆಸ್ ಸೋಲಿಗೆ ಬಿಜೆಪಿ ಕಾರಣ'

Rashmi Kasaragodu
Updated On : 14 May 2013, 12:44 pm

ದೇವನಹಳ್ಳಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಳಿಸಿದ ಮತಗಳಿಗಿಂತ ಈ ಬಾರಿ 10 ಸಾವಿರ ಮತ ಹೆಚ್ಚಾಗಿ ಪಡೆದಿದ್ದರೂ ಕಡಿಮೆ ಮತಗಳ ಅಂತರದಲ್ಲಿ ಸೋಲಾಗಿರುವುದಕ್ಕೆ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ.ಚಂದ್ರಣ್ಣರವರೇ ಕಾರಣ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವೆಂಕಟಸ್ವಾಮಿ ಹೇಳಿದರು.
ಸೋಮವಾರ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಗೆ ಈ ಚುನಾವಣೆಯಲ್ಲಿ 68381 ಮತಗಳು ಲಭ್ಯವಾಗಿದ್ದು ಎಲ್ಲ ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.  
ಬಿಜೆಪಿ ಕಳೆದ ಚುನಾವಣೆಯಲ್ಲಿ ಗಳಿಸಿದ ಮತಗಳಿಗಿಂತ ಐದು ಸಾವಿರ ಮತಗಳು ಕಡಿಮೆ ಗಳಿಸಿರುವುದಕ್ಕೆ ಚಂದ್ರಣ್ಣರವರು ಜೆಡಿಎಸ್‌ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿರುವುದೇ ಸಾಕ್ಷಿಯಾಗಿದೆ ಎಂದು ಶಾಸಕರು ತಿಳಿಸಿದರಲ್ಲದೆ ಬೂದಿಗೆರೆಯಲ್ಲಿ ಸುಮಾರು ಸುಮಾರು 4.5 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿದ್ದರೂ ಆ ಭಾಗದಲ್ಲಿ ಮತದಾರರು ಜೆಡಿಎಸ್‌ಗೆ ಮತ ನೀಡಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಜಗನ್ನಾಥ್‌ರವರು ಮಾತನಾಡಿ, ಪಕ್ಷಕ್ಕೆ ದ್ರೋಹ ಬಗೆದ ಕೆಲವರು ಪಕ್ಷಕ್ಕೆ ರಾಜಿನಾಮೆ ನೀಡಲಿ ಎಂದರು.
ಹಿರಿಯ ಮುಖಂಡರಾದ ಎಸ್‌ಎಲ್‌ಎನ್ ಅಶ್ವತ್ಥನಾರಾಯಣ್‌ರವರು ಮಾತನಾಡಿ, ನಮ್ಮ ಪಕ್ಷ ಇಲ್ಲಿ ಸೋತಿದ್ದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಎಲ್ಲ ವರ್ಗದ ಜನಾಂಗದವರಿಗೆ ಸ್ಪಂದಿಸುವ ಸಿದ್ದರಾಮಯ್ಯರವರು ಮುಖ್ಯಮಂತ್ರಿಗಳಾಗಿರುವುದರಿಂದ ನಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗುತ್ತವೆ ಎಂದರು.       
ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ, ಪುರಸಭಾ ಸದಸ್ಯಾರದ ಎಂ.ಮೂರ್ತಿ, ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕ ಅಧ್ಯಕ್ಷರಾದ ಮಜ್ಜಿಗೆ ಹೊಸಹಳ್ಳಿ ವೆಂಕಟೇಶ್ ಮಾತನಾಡಿದರು. ಸಭೆಯಲ್ಲಿ ಮುಖಂಡರಾದ ಎ.ಚಂದ್ರಶೇಖರ್ ಹಾಗೂ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement