ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರದಲ್ಲಿ ಸಂಭ್ರಮ

Rashmi Kasaragodu
Updated On : 14 May 2013, 12:42 pm

ದೊಡ್ಡಬಳ್ಳಾಪುರ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸೋಮವಾರ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ದೊಡ್ಡಬಳ್ಳಾಪುರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ವಿವಿಧೆಡೆ ಸಂಭ್ರಮದ ವಿಜಯೋತ್ಸವ ಆಚರಣೆ ಮಾಡಲಾಗಿದೆ.
ಇಲ್ಲಿನ ತಾಲೂಕು ಕುರುಬರ ಸಂಘ, ಜಿಲ್ಲಾ ಕುರುಬರ ಸಂಘ, ಸಂಗೊಳ್ಳಿರಾಯಣ್ಣ ಯುವ ವೇದಿಕೆ ಸೇರಿದಂತೆ ಅನೇಕ ಸಂಘಟನೆಗಳ ನೇತೃತ್ವದಲ್ಲಿ ಹಲವೆಡೆ ಸಂಭ್ರಮ ಹಂಚಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳಿಗೆ ಸೇರಿದ ನಾಯಕರೊಬ್ಬರು ಸಿಎಂ ಆಗುತ್ತಿರುವುದು ರಾಜ್ಯದ ಭವಿಷ್ಯ ಮತ್ತು ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆ. ಸ್ವತಃ ಪ್ರಗತಿಪರ ಚಿಂತನೆಗಳಿಂದ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಂಡಿರುವ ಸಿದ್ದರಾಮಯ್ಯ ಎಲ್ಲ ವರ್ಗಗಳಿಗೂ ಸಮಾನ ಆದ್ಯತೆ ಮತ್ತು ಸಮಾನ ನ್ಯಾಯ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿನ ಸಿದ್ಧಲಿಂಗಯ್ಯ ವೃತ್ತ, ಕನಕದಾಸ ರಸ್ತೆ, ಖಾಸ್‌ಬಾಗ್, ರೇಲ್ವೆ ನಿಲ್ದಾಣ ಬಳಿಯ ವಿ.ಕೃ.ಗೋಕಾಕ ವೃತ್ತ, ಅರಳುಮಲ್ಲಿಗೆ ವೃತ್ತ ಸೇರಿದಂತೆ ಅನೇಕ ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement