ನಿರಂತರ ಜನಪರ ಸೇವೆ, ಹೋರಾಟ: ಮುನೇಗೌಡ
ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಮುಂಬರುವ ದಿನಗಳಲ್ಲಿ ಜನಪರವಾದ ಹೋರಾಟಗಳನ್ನು ನಿರಂತರವಾಗಿ ನಡೆಸಲಾಗುವುದುಎಂದು ಕ್ಷೇತ್ರದ ಪರಾಜಿತ ಅಭ್ಯರ್ಥಿ ಬಿ.ಮುನೇಗೌಡ ಹೇಳಿದರು.
ಪಟ್ಟಣದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸೋಮವಾರ ಬಸವ ಜಯಂತಿ ಆಚರಿಸಿದ ಅವರು, ಪಡಿತರ, ಪಿಂಚಣಿ, ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಹಂತದಲ್ಲಿ ತಾಲೂಕಿನ ಜನರಿಗೆ ಮಾಡುತ್ತಿರುವ ಸೇವಾ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದರು.
ತಾಪಂ ಮಾಜಿ ಅಧ್ಯಕ್ಷೆ ದೇವರಾಜಮ್ಮ, ಮುಖಂಡರಾದ ಕುಂಟನಹಳ್ಳಿ ಮಂಜುನಾಥ್ ಹಾಜರಿದ್ದರು.