ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಲಾರಿ ಉರುಳಿ ಒಬ್ಬ ಸಾವು; 7 ಮಂದಿ ಗಾಯ

Vishwanath S
Updated On : 15 May 2013, 12:26 pm

ರಾಮನಗರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಲಾರಿಯಲ್ಲಿದ್ದ ಒಬ್ಬ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವನನ್ನು ಅಸ್ಸಾಂ ಮೂಲಕ ಜಿಯಾದ್ ಉಲ್ಲಾ ಇಸ್ಲಾಂ(22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕೂಟಗಲ್ ಬಳಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಲಾರಿಯಲ್ಲಿದ್ದ ಇಸ್ಲಾಂ ಮೃತಪಟ್ಟರೆ ಚಾಲಕನೂ ಸೇರಿದಂತೆ ಏಳು ಮಂದಿ ತೀವ್ರವಾಗಿ ಗಾಯಗೊಂಡರು.  ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಯಿತು. ಇಸ್ಲಾಂನ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಬೈಕ್‌ಗೆ ಬಿಎಂಟಿಸಿ ಡಿಕ್ಕಿ; ಸವಾರ ಸಾವು
ರಾಮನಗರ: ಚಲಿಸುತ್ತಿದ್ದ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.  ಕುಂಬಳಗೋಡು ನಿವಾಸಿ ನಾಗರಾಜ(17) ಮೃತಪಟ್ಟ ದುರ್ದೈವಿ. ಕುಂಬಳಗೋಡಿನ ಕಣಮಿಣಿಕೆ ಕಾಲೋನಿ ಬಳಿ ಬೈಕ್‌ನಲ್ಲಿ ಚಲಿಸುತ್ತಿದ್ದ ನಾಗರಾಜುಗೆ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿಯೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡು, ರಕ್ತಸ್ರಾವವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ. ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಕ್ಕೆ ಲಾರಿ ಡಿಕ್ಕಿ: ಕ್ಲೀನರ್ ಸಾವು
ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ಮಹಿಮಾಪುರ ಗೇಟ್ ಹತ್ತಿರ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಕ್ಲೀನರ್ ಸಾವನ್ನಪ್ಪಿದ್ದು, ಚಾಲಕ ಗಾಯಗೊಂಡಿರುವ ಘಟನೆ ಮಂಗಳವಾರ  ನಡೆದಿದೆ. ಮೃತ ಕ್ಲೀನರ್‌ನನ್ನು ಅಭೀಷೆಕ್‌ಗೌಡ(22) ಎಂದು ಗುರುತಿಸಲಾಗಿದೆ. ಲಾರಿ ಚಾಲಕ ನಾಗರಾಜ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಲಾರಿ ಬೆಂಗಳೂರಿನಿಂದ ತುಮಕೂರಿನ ಕಡೆ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement