20 ರಿಂದ ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್
ದೇವನಹಳ್ಳಿ: ಇಲ್ಲಿನ ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾ ಸಂಘ ಹಾಗೂ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಮೇ 20 ರಿಂದ 26 ರವರೆಗೆ ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಡಿ.ಎಂ.ವೇಣುಗೋಪಾಲ್ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಂದ್ಯಾವಳಿಯಲ್ಲಿ 10 ರಿಂದ 13 ಹಾಗೂ 13 ರಿಂದ 15 ವಯೋವಾನದೊಳಗಿನ ಬಾಲಕ ಬಾಲಕಿಯರ ಸಿಂಗಲ್ಸ್ ಮತ್ತು ಡಬಲ್ಸ್ ಪಂದ್ಯಗಳು ನಡೆಯಲಿದ್ದು ತ್ರೀ ಸ್ಟಾರ್ ರಾಜ್ಯ ಮಟ್ಟದ ರ್ಯಾಂಕಿಂಗ್ ಟೂರ್ನಿಮೆಂಟ್ ಆಯೋಜಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಪಟೇಲ್ ದೊಡ್ಡವೆಂಕಟಪ್ಪ ತಿಳಿಸಿ ಈ ಪಂದ್ಯಾವಳಿಯಲ್ಲಿ ರಾಜ್ಯದ ಸುಮಾರು 600 ಕ್ಕೂ ಹೆಚ್ಚು ಸ್ಪರ್ಧಾಳುಗಳು ಎಲ್ಲ ಜಿಲ್ಲೆಗಳಿಂದ ಬಾಗವಹಿಸಲಿದ್ದಾರೆ ಎಂದು ತಿಳಿಸಿದರು. ಉಪಾಧ್ಯಕ್ಷರಾದ ಶ್ರೀನಿವಾಸಮೂರ್ತಿ, ಖಜಾಂಚಿ ಮಂಜುನಾಥ ಬಾಬು ಕಾರ್ಯದರ್ಶಿಎ ಕೆ.ಪ್ರಕಾಶ್ ಉಪಸ್ಥಿತರಿದ್ದರು.