ಎಚ್.ಡಿ. ದೇವೇಗೌಡರ ಹುಟ್ಟುಹಬ್ಬ; ಅಭಿಮಾನಿಗಳಿಂದ ಊಟ, ಬಟ್ಟೆ ವಿತರಣೆ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ 81ನೇ ಹುಟ್ಟಹಬ್ಬದ ಅಂಗವಾಗಿ ಮೇ 18ರಂದು ಎಚ್.ಡಿ ದೇವೇಗೌಡರ ಅಭಿಮಾನಿಗಳ ಯುವಜನ ಸಮಾಜಸೇವಾ ವೇದಿಕೆ, ಬುದ್ದಿಮಾಂದ್ಯ ಮಕ್ಕಳಿಗೆ ಉಚಿತ ಊಟ, ಬಟ್ಟೆ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದೆ.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಪ್ರಕಾಶ್, ಕೆ.ಆರ್. ನಗರದ ಅಂಧರ ಆಶ್ರಮದಲ್ಲಿ ಬಡವರಿಗೆ, ಅಂಗವಿಕಲರಿಗೆ, ವಯೋವೃದ್ಧರಿಗೆ ಹಾಗೂ ಬುದ್ದಿಮಾಂದ್ಯ ಮಕ್ಕಳಿಗೆ ಅನುಕೂಲವಾಗುವಂತೆ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.