ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಚಿತ್ರಕಲೆ, ಶಿಲ್ಪಕಲೆ, ವಾಸ್ತುಶಿಲ್ಪ ಶಿಕ್ಷಣ ತರಬೇತಿಗಾಗಿ ಅರ್ಜಿ ಆಹ್ವಾನ

Vishwanath S
Updated On : 18 May 2013, 12:48 pm

ಚನ್ನಪಟ್ಟಣ: ಹೊಂಬೇಗೌಡ ಶಿಕ್ಷಣ ಸಂಸ್ಥೆ ವತಿಯಿಂದ ನಡೆಯುತ್ತಿರುವ ಶ್ರೀ ಗಂಗರಸ ಕಾಲೇಜ್
ಆಫ್ ಸೈನ್ಸ್, ಆರ್ಟ್ಸ್ ಇಲ್ಲಿ ಪ್ರಸಕ್ತ ಸಾಲಿಗೆ ಚಿತ್ರಕಲೆ, ಶಿಲ್ಪಕಲೆ, ವಾಸ್ತುಶಿಲ್ಪ ಶಿಕ್ಷಣ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವವರು, ಪಿಯುಸಿಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರುವವರು ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಿಂದ ಬ್ಯಾಚ್ಯುಲರ್ ಆಫ್ ವಿಷುಯಲ್ ಆರ್ಟ್ಸ್(ಬಿವಿಎ) ಮಾನ್ಯತೆಯನ್ನು ಕಾಲೇಜು ಪಡೆದಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ, ವಸತಿ ಸೌಲಭ್ಯ, ಬಸ್ ಪಾಸ್, ರೈಲು ಪಾಸ್ ವ್ಯವಸ್ಥೆ ಒದಗಿಸಲಾಗುವುದಲ್ಲದೆ ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನೂ ಸಹ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಎಮ್.ಎನ್. ದೊಡ್ಡಾಚಾರ್, 8762990726 ಸಂಖ್ಯೆಯನ್ನು ಅಥವಾ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement