ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆ
ಚನ್ನಪಟ್ಟಣ ರಾಜ್ಯ ಸರ್ಕಾರಿ ನೌಕರರಿಗೆ ಶೇ.5ರಷ್ಟು ಭತ್ಯೆ ಬಿಡುಗಡೆ ಮಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಟಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಬಹುತೇಕ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನೂತನ ಮುಖ್ಯಮಂತ್ರಿಗಳು ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಮುಂದಾಗುವಂತೆ ಮನವಿ ಮಾಡಿದ್ದಾರೆ.
ಹಾಗೆಯೇ ರಾಮನಗರ ಜಿಲ್ಲೆಯ ನೂತನ ಶಾಸಕರಾಗಿ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್, ಎಚ್.ಸಿ.ಬಾಲಕೃಷ್ಣ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೂ ಸಂಘದ ವತಿಯಿಂದ ಅಭಿನಂದಿಸಿದ್ದಾರೆ.