ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಡಿಕೆಶಿಗೆ ಸಚಿವ ಸ್ಥಾನ ನಿರಾಕರಣೆಗೆ ಒಕ್ಕಲಿಗರ ಒಕ್ಕೂಟ ಆಕ್ರೋಶ

Vishwanath S
Updated On : 22 May 2013, 12:55 pm

ಕ.ಪ್ರ.ವಾರ್ತೆ ,   ರಾಮನಗರ ,   ಮೇ 21
ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಜನಾಂಗದ ಪ್ರಭಾವಿ ನಾಯಕರಾಗಿರುವ  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಈ ಬಾರಿ ಸಂಪುಟದಲ್ಲಿ ಸ್ಥಾನ ನಿರಾಕರಣೆ ವಿರುದ್ಧ  ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಆರ್. ವೆಂಕಟೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮಿಸಿರುವ ಶಿವಕುಮಾರ್ ಅವರಿಗೆ ಕಳಂಕದ ಆಪಾದನೆ ಹೊರಸಿ ಸಚಿವ ಸ್ಥಾನ ತಪ್ಪಿರುವುದು ಖಂಡನೀಯ ಎಂದಿದ್ದಾರೆ.  ಅವರಿಗೆ ಸಚಿವ ಸ್ಥಾನ ತಪ್ಪಿರುವುದು ಪ್ರಬಲವಾಗಿರುವ ಒಕ್ಕಲಿಗ ಸಮುದಾಯಕ್ಕೆ ಕಾಂಗ್ರೆಸ್ ಎಸಗಿರುವ ದ್ರೋಹವಾಗಿದೆ ಎಂದು ವೆಂಕಟೇಶ್ ಕಿಡಿ ಕಾರಿದ್ದಾರೆ. ಒಂದೊಮ್ಮೆ ಶಿವಕುಮಾರ್ ಅವರಿಗೆ ಸಚಿವ ಸ್ಥಾನ ನೀಡದದಿದ್ದಲ್ಲಿ  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಭಾಗದಲ್ಲಿ ದೊಡ್ಡ ಪೆಟ್ಟು ಬೀಳಲಿದೆ.  ಈ ಬಗ್ಗೆ ಕಾಂಗ್ರೆಸ್ ವರಿಷ್ಠರು ತಕ್ಷಣ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವ್ಯತಿರಿಕ್ತ ಪರಿಣಾಮ:  ರಾಮನಗರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಏಕೈಕ ಪ್ರತಿನಿಧಿಯಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಸ್ಥಾನ ನೀಡದೇ ಹೋದಲ್ಲಿ ಜಿಲ್ಲೆಯ ಅಭಿವೃದ್ಧಿಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿರುವ ಅವರಿಗೆ ಸಚಿವ ಸ್ಥಾನದ ಜತೆಗೆ ಜಿಲ್ಲಾ ಉಸ್ತುವಾರಿ ಹೊಣೆ ನೀಡಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement