ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಮಟ್ಟದಲ್ಲಿ ಜೈಲು ಭರೋ ಚಳವಳಿ
ಸೂಲಿಬೆಲೆ: ಕೇಂದ್ರ ಸರ್ಕಾರ ಬೆಲೆ ಏರಿಕೆ ಹಾಗೂ ಚೈನಾ ದೇಶದವರು ಭಾರತ ಗಡಿ ಪ್ರದೇಶವನ್ನು ಆಕ್ರಮಿಸಿಕೊಳ್ಳುತ್ತಿರುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರದ ಧೋರಣಿಯನ್ನು ಖಂಡಿಸಿ ಮೇ 27 ರಾಷ್ಟ್ರದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜೈಲು ಭರೋ ಚಳವಳಿಯನ್ನು ಹಮ್ಮಿಕೊಳ್ಳಲು ಬಿಜೆಪಿ ತಿರ್ಮಾನಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಎಂ. ನಾರಾಯಣಸ್ವಾಮಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪದೇ ಪದೇ ಬೆಲೆ ಏರಿಕೆಯನ್ನು ಮಾಡುತ್ತಿದ್ದು, ಭಾರತ ಗಡಿ ಪ್ರದೇಶದಲ್ಲಿ ಚೀನಾ ದೇಶದವರು ಭಾರತದ ಭೂ ಭಾಗವನ್ನು ಆಕ್ರಮಿಸಿಕೊಳ್ಳುತ್ತಿದ್ದರೂ ಯಾವುದೇ ನಿಯಂತ್ರಣ ಕ್ರಮ ಕೈಗೊಳ್ಳದ ಕೇಂದ್ರ ವಿರುದ್ಧ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜೈಲು ಭರೋ ಚಳವಳಿ ನಡೆಸಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಟ್ಟದ ಪ್ರತಿಭಟನೆಯನ್ನು ದೊಡ್ಡಬಳ್ಳಾಪುರ ರೇಲ್ವೆ ಸರ್ಕಲ್ ಬಳಿ ಮೇ 27 ರಂದು ಬೆ.11 ಗಂಟೆ ಹಮ್ಮಿಕೊಳ್ಳಲಾಗಿದೆ. ಸುಮಾರು 1,500 ರಷ್ಟು ಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.