ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸಿಇಟಿ ಮಾದರಿ ಕೇಂದ್ರೀಯ ಪ್ರವೇಶ ನೀತಿ ಜಾರಿಗೊಳಿಸಿ

Vishwanath S
Updated On : 24 May 2013, 11:41 am

ರಾಮನಗರ: ಬಡ ಪ್ರತಿಭಾವಂತ ವಿದ್ಯಾರ್ಥಿಗಳೂ ಕೂಡ ಉತ್ತಮ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಸಿಇಟಿ ಮಾದರಿಯಲ್ಲಿ ಎಲ್‌ಕೆಜಿ, ಯುಕೆಜಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಕೇಂದ್ರೀಯ ಪ್ರವೇಶ ನೀತಿಯನ್ನು ಜಾರಿಗೊಳಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ ಶಿಕ್ಷಣ ಕ್ಷೆತ್ರ ವ್ಯಾಪಾರದ ಮಾರುಕಟ್ಟೆಯಾಗಿ ಪರಿವರ್ತನೆಗೊಂಡಿದ್ದು, ಶಿಕ್ಷಣ ಬಿಕರಿಯ ವಸ್ತುವಾಗಿದೆ. ಸಮಾಜಕ್ಕೆ ಭದ್ರ ಅಡಿಪಾಯ ಹಾಕಬೇಕಾದ ಈ ಕ್ಷೇತ್ರ ಇಂದು ಮೌಲ್ಯಗಳ ಅಧಃಪತನದಿಂದ ಅನೈತಿಕತೆಯ ಕೂಪವಾಗಿದೆ ಎಂದು ಸಂಘಟನೆಯ ರಾಜ್ಯ ಸಹ ಸಂಚಾಲಕ ಸುನಿಲ್ ಕುಮಾರ್ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡ ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಶಾಲೆಗಳ ಮಾಲೀಕರಿಗೆ ಇರುವ ಹಣದ ವ್ಯಾಮೋಹವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಸರ್ಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶುಲ್ಕ ವಿಧಿಸುವ ನಿಯಮಾವಳಿ ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.  ಡೊನೇಷನ್ ವಸೂಲಿ ಮಾಡುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ವಸ್ತುವಿಗೂ ಇಂತಿಷ್ಟೇ ಬೆಲೆ ಎಂದು ನಿಗದಿ ಪಡಿಸಲಾಗಿದೆ. ಆದರೆ, ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯಲು ಮಾತ್ರ ನಿರ್ದಿಷ್ಟ ಶುಲ್ಕ ನಿಗದಿಯಾಗಿಲ್ಲ. ಅಭಿವೃದ್ಧಿ ಶುಲ್ಕ, ಕಟ್ಟಡ ಶುಲ್ಕ ಸೇರಿದಂತೆ ಶೈಕ್ಷಣಿಕ ಪರಿಕರಗಳು, ಯೂನಿಫಾರಂ, ಶೂಗಳನ್ನೂ ಕೂಡ ತಮ್ಮಲ್ಲೇ ಖರೀದಿ ಮಾಡಬೇಕೆಂದು ಒತ್ತಡ ಹೇರಿ ಪೋಷಕರನ್ನು ಸುಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement