ಕೇಂಬ್ರಿಡ್ಜ್ ವಿದ್ಯಾಸಂಸ್ಥೆ ಶೇ. ನೂರು ಫಲಿತಾಂಶ
ಚನ್ನಪಟ್ಟಣ: ಪ್ರಸಕ್ತ ಸಾಲಿನ ಸಿಬಿಎಸ್ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಪಟ್ಟಣದ ಕೇಂಬ್ರಿಡ್ಜ್ ವಿದ್ಯಾಸಂಸ್ಥೆಯು ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುವ ಮೂಲಕ ತನ್ನ ದಾಖಲೆಯನ್ನು ನಾಲ್ಕನೇ ವರ್ಷವೂ ಮುಂದುವರೆಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆಗೆ ಕುಳಿತಿದ್ದ ಸಂಸ್ಥೆಯ 49 ವಿದ್ಯಾರ್ಥಿಗಳ ಪೈಕಿ ಮೂವರು ಸಿಬಿಎಸ್ಸಿ ಶೇ.95 ರಷ್ಟು ಅಂಕ ಗಳಿಸುವ ಮೂಲಕ ಟಾಪರ್ ಸ್ಥಾನವನ್ನು ಪಡೆದಿದ್ದು, 19 ಮಂದಿ ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ 25 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಗಣೇಶ್.ಎಂ.ಎಸ್, ದರ್ಶನ್.ವಿ, ಹರ್ಷಿತ.ಎನ್ ಶೇ.95 ರಷ್ಟು ಅಂಕಗಳಿಸಿರುವ ವಿದ್ಯಾರ್ಥಿಗಳು. ಕಳೆದ ನಾಲ್ಕು ವರ್ಷಗಳಿಂದ ಸಿಬಿಎಸ್ಸಿ ಪಠ್ಯಕ್ರಮದ 10ನೇ ತರಗತಿಯ ಪರೀಕ್ಷೆಯಲ್ಲಿ ಕೇಂಬ್ರಿಡ್ಜ್ ವಿದ್ಯಾಸಂಸ್ಥೆ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುತ್ತಾ ಬಂದಿದೆ.
ಉತ್ತಮ ಸಾಧನೆ ಮಾಡುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗವನ್ನು ಸಂಸ್ಥೆಯ ಕಾರ್ಯದರ್ಶಿ ಎಸ್.ಲಿಂಗೇಶ್ ಕುಮಾರ್, ಧರ್ಮದರ್ಶಿ ಚಿತ್ರಲಿಂಗೇಶ್ ಕುಮಾರ್, ಪ್ರಾಂಶುಪಾಲರಾದ ರೇಣುಕಾದೇವಿ ಅಭಿನಂದಿಸಿದ್ದಾರೆ.