ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬಿಡದಿ: ಮಲಗಿದ್ದ ವೃದ್ಧ ಮಹಿಳೆ ಕೊಲೆ

Rashmi Kasaragodu
Updated On : 28 May 2013, 12:24 pm

ರಾಮನಗರ: ಮನೆಯಲ್ಲಿ ಮಲಗಿದ್ದ ವೃದ್ಧ ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಹೆಗ್ಗಡೆಗೆರೆ ಗ್ರಾಮದ ವೆಂಕಟಮ್ಮ (75) ಕೊಲೆಯಾದ ದುರ್ದೈವಿ. ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಈಕೆ ಭಾನುವಾರ ರಾತ್ರಿ ನಿದ್ರಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದರಿಂದ ವೆಂಕಟಮ್ಮ ಸ್ಥಳದಲ್ಲೇ ಅಸುನೀಗಿದ್ದಾರೆ. ಸೋಮವಾರ ಬೆಳಗ್ಗೆ ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement