ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿದ ಪತಿ
ಚನ್ನಪಟ್ಟಣ: ವರದಕ್ಷಿಣೆ ತರಲಿಲ್ಲ ಎಂದು ಗಂಡನೇ ಪತ್ನಿಯನ್ನು ಸೀಮೆಎಣ್ಣೆ ಸುರಿದು ಬೆಂಕಿ ಕೊಲೆಗೈದಿರುವ ಘಟನೆ ತಾಲೂಕಿನ ಕೆಂಚಾಬೋವಿ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಪೀಜಾ ಬಾನು (30) ಮೃತ ದುರ್ದೈವಿ, ಈಕೆಯ ಪತಿ ರಪೀಕ್ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದು ತೀವ್ರಗಾಯ ಗೊಂಡಿದ್ದ ಈಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಮದುವೆಯ ಸಂದರ್ಭದಲ್ಲಿ ಸಾಕಷ್ಟು ವರದಕ್ಷಿಣೆ ನೀಡಲಾಗಿತ್ತಾದರೂ ವ್ಯಾಪರಕ್ಕಾಗಿ ಮತ್ತಷ್ಟು ವರದಕ್ಷಿಣೆ ತರುವಂತೆ ಪತಿ ಪೀಡಿಸುತ್ತಿದ್ದು. ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಬೆಂಕಿ ಹಚ್ಚಿರುವುದಾಗಿ ಮೃತಳ ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ರಫೀಕ್ನನ್ನು ವಶಕ್ಕೆ ತೆಗೆದು ಕೊಂಡಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದಾರೆ.