ಉನ್ನತ ಮಟ್ಟದ ತನಿಖೆಗೆ ಆದೇಶ
ದೊಡ್ಡಬಳ್ಳಾಪುರ ತಾಲೂಕಿನ ಘಾಟಿಸುಬ್ರಹ್ಮಣ್ಯದ ಬಳಿಯ ಎಸ್.ಆರ್.ವ್ಯಾಲಿ ರೆಸಾರ್ಟ್ನಲ್ಲಿ ನಡೆದಿರುವ ನಂಗಾನಾಚ್ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಐಜಿ ಅವರ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚನೆಯಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಎಸ್ಪಿ ಡಾ.ಪ್ರಕಾಶ್ ಹೇಳಿದರು.
ಇಲ್ಲಿನ ಡಿವೈಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಪ್ರಕರಣ 2009ರಲ್ಲಿ ನಡೆದಿದೆ ಎನ್ನಲಾಗಿದ್ದು, 2010ರ ನವಂಬರ್ 9ನೇ ತಾರೀಖು ರೆಸಾರ್ಟ್ ಮಾಲೀಕರು ಮತ್ತು ಪ್ರಕರಣದ ಬಗ್ಗೆ ದೂರು ದಾಖಲಾಗಿದೆ. ಆದರೆ ಆಗ ಇದ್ದ ಡಿವೈಎಸ್ಪಿ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಈ ಬಗ್ಗೆ ಎಫ್ಐಆರ್ ಕೂಡ ದಾಖಲಿಸಿಲ್ಲ. ಈ ಬಗ್ಗೆ ಕೂಡ ತನಿಖೆ ನಡೆಸಲಾಗುವುದು. ಆಗ ಡಿವೈಎಸ್ಪಿ ಆಗಿದ್ದ ಚಂದ್ರಕಾಂತ್, ಸಿಪಿಐ ಸಿದ್ಧಲಿಂಗಪ್ಪ, ಗ್ರಾಮಾಂತರ ಠಾಣೆಯ ಎಸೈಗಳ ಹಸ್ತಕ್ಷೇಪದ ಬಗ್ಗೆಯೂ ತನಿಖೆಯಾಗಲಿದೆ ಎಂದು ಅವರು ವಿವರಿಸಿದರು.