ಕಟ್ಟುನಿಟ್ಟಿನ ಕ್ರಮಕ್ಕೆ ಶಾಸಕ ಆಗ್ರಹ
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿಯ ರೆಸಾರ್ಟ್ ಒಂದರಲ್ಲಿ ನಡೆದಿರುವ ಅಶ್ಲೀಲ ನೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದ್ದಾರೆ.
ರೆಸಾರ್ಟ್ ಇರುವ ಪ್ರದೇಶ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಆದಾಗ್ಯೂ ತಾಲೂಕಿನ ಭಾಗವಾಗಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಧಿಕಾರಿಗಳಿಗೂ ಈ ಬಗ್ಗೆ ತನಿಖೆಗೆ ಸಹಕರಿಸುವಂತೆ ಆದೇಶಿಸುವುದಾಗಿ ಹೇಳಿರುವ ಅವರು, ಈ ರೀತಿಯ ಕೃತ್ಯಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.