ಗೆಹ್ಲೋಟ್ ನೇತೃತ್ವಕೋರ್ ಕಮಿಟಿ
ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಥಾವರ್ಸಿಂಗ್ ಗೆಹ್ಲೋಟ್ ಅವರ ನೇತೃತ್ವದಲ್ಲಿ ಮಂಗಳವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು.
ಗೆಹ್ಲೋಟ್ ಅವರು ರಾಜ್ಯ ಉಸ್ತುವಾರಿ ವಹಿಸಿಕೊಂಡ ಮೇಲೆ ಇದೇ ಮೊದಲ ಬಾರಿ ಬೆಂಗಳೂರಿಗೆ ಆಗಮಿಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದ ಕೋರ್ ಕಮಿಟಿ ಸದಸ್ಯರ ಜತೆ ಪಕ್ಷದ ಸಂಘಟನೆ ಕುರಿತಂತೆ ಮಾತುಕತೆ ನಡೆಸಿದರು.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶ, ಯಡಿಯೂರಪ್ಪ ಅವರು ಬಿಜೆಪಿ ತೊರೆದ ಮೇಲೆ ಪಕ್ಷದ ಮೇಲೆ ಆಗಿರುವ ಪರಿಣಾಮ, ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತಂತೆ ಗೆಹ್ಲೋಟ್ ಅವರು ರಾಜ್ಯ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಮಾಜಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಸಂಘಟನಾ ಕಾರ್ಯದರ್ಶಿ ಸಂತೋಷ್ ಸಭೆಯಲ್ಲಿ ಇದ್ದರು.