ಅರಸು ಪ್ರಶಸ್ತಿಗೆ ಅರ್ಜಿ ಆಹ್ವಾನ
ರಾಮನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2013-14ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ರಾಜ್ಯ ಮಟ್ಟದ ಪ್ರಶಸ್ತಿಯು ರು.1 ಲಕ್ಷ, ವಿಭಾಗ ಮಟ್ಟದ ಪ್ರಶಸ್ತಿಯು ರು.50 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ದೇವರಾಜು ಅರಸು ಅವರ ಧ್ಯೇಯೋದ್ದೇಶಗಳನ್ನು ಕಾರ್ಯಗತಗೊಳಿಸುವಲ್ಲಿ ನಿರತರಾಗಿರುವವರು, ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವವರು, ಹಿಂದುಳಿದ ವರ್ಗಗಳನ್ನು ಸಂಘಟಿಸಿ ಅವರ ಮೀಸಲಾತಿ, ಶಿಕ್ಷಣ, ಸಾಮಾಜಿಕ ಪರಿವರ್ತನೆಗಾಗಿ ಶ್ರಮಿಸಿರುವವರು, ಶಿಕ್ಷಣ, ಆರ್ಥಿಕಾಭಿವೃದ್ಧಿ, ಔದ್ಯೋಗಿಕ ಕ್ಷೇತ್ರಗಳ ಉನ್ನತಿಗೆ ಕಾರ್ಯನಿರತರಾಗಿ ವಿಭಾಗ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟವರು, ಹಿಂದುಳಿದ ವರ್ಗಗಳಲ್ಲಿ ಅತ್ಯಂತ ಹಿಂದುಳಿದ ಜನಾಂಗದವರನ್ನು ಮುಖ್ಯ ವಾಹಿನಿಗೆ ತರಲು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಶ್ರಮಿಸುತ್ತಿರುವವರು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ಇಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳು ಅರ್ಜಿಯನ್ನು ಭಾವಚಿತ್ರ, ಸ್ವಯಂ ವಿಳಾಸ, ಸ್ವ ಪರಿಚಯ ಮತ್ತು ಸಾಧನೆಗಳ ಬಗೆಗಿನ ಕಿರು ಪರಿಚಯ ಹಾಗೂ ಛಾಯಾ ಚಿತ್ರಗಳೊಂದಿಗೆ ದ್ವಿಪ್ರತಿಯಲ್ಲಿ ಜೂನ್ 30ರೊಳಗೆ ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, 3ನೇ ಮಹಡಿ, ಡಿ.ದೇವರಾಜ ಅರಸು ಭವನ, ಮಿಲ್ಲರ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು 560052 ಇಲ್ಲಿಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಮತ್ತು ವಿವರಗಳನ್ನು ಇಲಾಖೆಯ ವೆಬ್ಸೈಟ್ನಿಂದ ಮತ್ತು ಆಯಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ. 080-22374752 ಸಂಪರ್ಕಿಸಬಹುದು ಎಂದು ಇಲಾಖೆ ಆಯುಕ್ತ ಆರ್. ಶಾಂತರಾಜ್ ತಿಳಿಸಿದ್ದಾರೆ.